ಕಲಬುರ್ಗಿಯಲ್ಲಿ ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಬುಧವಾರ, ಜೂನ್ 19, 2019
27 °C

ಕಲಬುರ್ಗಿಯಲ್ಲಿ ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Published:
Updated:

ಕಲಬುರ್ಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿರುವ ಮತ ಎಣಿಕೆ ಕೇಂದ್ರಕ್ಕೆ ಬುಧವಾರ ಭೇಟಿ ನೀಡಿದ ಜಿಲ್ಲಾ ಚುನಾವಣಾ ಅಧಿಕಾರಿ ಆರ್.ವೆಂಕಟೇಶಕುಮಾರ್ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಗುಲಬರ್ಗಾ ಲೋಕಸಭಾ ಹಾಗೂ ಚಿಂಚೋಳಿ ಉಪ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಚಿಂಚೋಳಿ ಮತಕ್ಷೇತ್ರದ ಎಣಿಕೆಗೆ ಪ್ರತ್ಯೇಕ ಮತ ಎಣಿಕೆ ಕೇಂದ್ರವನ್ನು ತೆರೆಯಲಾಗಿದೆ. ಈಗಾಗಲೇ ಅಣಕು ಮತ ಎಣಿಕೆ ಮಾಡಲಾಗಿದೆ. ಒಟ್ಟು 14 ಟೇಬಲ್ ಮಾಡಲಾಗಿದ್ದು, 14 ಜನ ಏಜೆಂಟ್ ಮತ್ತು ಒಬ್ಬರು ಆರ್.ಒ ಇರುತ್ತಾರೆ ಎಂದು ಮಾಹಿತಿ ನೀಡಿದರು.

ಮೊದಲು ಅಂಚೆ ಮತಪತ್ರಗಳನ್ನು ಎಣಿಕೆ ಮಾಡಲಾಗುವುದು. ಮೊಬೈಲ್ ಫೋನ್ ಬಳಸುವಂತಿಲ್ಲ. ಅಧಿಕಾರಿಗಳು ಕೂಡ ಬಳಸುವಂತಿಲ್ಲ. ವಿಶ್ವವಿದ್ಯಾಲಯದ ಆವರಣದೊಳಕ್ಕೆ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. 130ಕ್ಕೂ ಅಧಿಕ ಅರೆ ಸೇನಾ ಪಡೆ ಸಿಬ್ಬಂದಿ, 2 ಸಾವಿರ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಹೊರಗಡೆ ಮೂರು ಹಂತದ ಭದ್ರತೆಯನ್ನು ಒದಗಿಸಲಾಗಿದೆ. ಮತ ಎಣಿಕೆ ಕೇಂದ್ರದ 100 ಮೀ. ಸುತ್ತಮುತ್ತ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.

2 ಸಾವಿರ ಮತ ಎಣಿಕೆ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು 20 ಸುತ್ತು ಮತ ಎಣಿಕೆ ನಡೆಯಲಿದೆ. ಇವಿಎಂ ಎಣಿಕೆ ಮುಗಿದ ಬಳಿಕ ವಿ.ವಿ. ಪ್ಯಾಟ್ ಎಣಿಕೆ ಮಾಡಲಾಗುವುದು. ಇದಕ್ಕಾಗಿ ಪ್ರತ್ಯೇಕ ಟೇಬಲ್ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಚಿಂಚೋಳಿಯಲ್ಲಿ ಅಂಚೆ ಮತಪತ್ರಗಳ ಸಂಖ್ಯೆ ಬಹಳ ಕಡಿಮೆ ಇದೆ. 14 ಟೇಬಲ್ ಗಳನ್ನು ಅಳವಡಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಗಲಾಟೆ ಆಗಬಾರದು ಎಂಬ ಕಾರಣಕ್ಕೆ ಮೆರವಣಿಗೆ, ವಿಜಯೋತ್ಸವ ನಿಷೇಧಿಸಲಾಗಿದೆ ಎಂದು ತಿಳಿಸಿದರು. ಸುವಿಧಾ ಆ್ಯಪ್ ನಲ್ಲಿ ಮತ ಎಣಿಕೆಯ ಅಪ್ಡೇಟ್ ಸಿಗಲಿದೆ. ಒಂದೊಂದು ಸುತ್ತಿನ ಎಣಿಕೆ ಬಳಿಕ ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ, ಶಿಷ್ಟಾಚಾರ ತಹಶಿಲ್ದಾರ್ ಪ್ರಕಾಶ ಚಿಂಚೋಳಿಕರ್ ಇದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !