ಭಾನುವಾರ, ಅಕ್ಟೋಬರ್ 25, 2020
25 °C

ಕಲಬುರಗಿ: ಸಿಲಿಂಡರ್ ಸ್ಪೋಟದಿಂದ ನಾಲ್ವರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ನಗರದ ಚೌಡೇಶ್ವರಿ ನಗರದ ರಮೇಶ ಫಿರೋಜಾಬಾದ್ ಎಂಬುವವರ ಮನೆಯಲ್ಲಿ ಶುಕ್ರವಾರ ‌ಬೆಳಿಗ್ಗೆ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಗಾಯಗೊಂಡಿದ್ದಾರೆ.

ಗಂಭೀರವಾಗಿ ಗಾಯಗೊಂಡ ಅಡುಗೆ ಕೆಲಸ ಮಾಡುತ್ತಿದ್ದ ಶಶಿಕಲಾ ಅವರನ್ನು ‌ನಗರದ ಯುನೈಟೆಡ್ ಆಸ್ಪತ್ರೆಗೆ ‌ದಾಖಲಿಸಲಾಗಿದೆ. ರಮೇಶ್ ಫಿರೋಜಾಬಾದ್, ಅವರ ಪುತ್ರಿ ಅಂಬಿಕಾ ಹಾಗೂ ‌ಪುತ್ರ ಮಲ್ಲಿನಾಥ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.

ಅಡುಗೆ ಅನಿಲ ಸಿಲಿಂಡರ್ ‌ಖಾಲಿಯಾಗಿದ್ದರಿಂದ ಬೇರೊಂದು ಸಿಲಿಂಡರ್ ಗೆ ಪೈಪ್ ಕನೆಕ್ಷನ್ ಕೊಡುವ ಸಂದರ್ಭದಲ್ಲಿ ‌ಸಿಲಿಂಡರ್ ಸ್ಫೋಟಗೊಂಡಿದೆ. ಇದರಿಂದಾಗಿ ‌ಮನೆಯ ಬಾಗಿಲು, ಕಿಟಕಿಗಳು ಒಡೆದು ನುಚ್ಚು ನೂರಾಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು