ಕಲಬುರ್ಗಿ: ಜೇವರ್ಗಿಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ

7

ಕಲಬುರ್ಗಿ: ಜೇವರ್ಗಿಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ

Published:
Updated:

ಕಲಬುರ್ಗಿ: ಜೇವರ್ಗಿ ಪುರಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಬಿಜೆಪಿ ಯಶಸ್ವಿಯಾಗಿದ್ದು, ಕಾಂಗ್ರೆಸ್ ಸಂಪೂರ್ಣವಾಗಿ ನೆಲ ಕಚ್ಚಿದೆ.

ಒಟ್ಟು 23 ಬಲದ ಸದಸ್ಯ ಸ್ಥಾನದಲ್ಲಿ ಬಿಜೆಪಿ 17, ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.

ವಾರ್ಡ್ ಸಂಖ್ಯೆ 11 ಮತ್ತು 15 ರಲ್ಲಿ ಇಬ್ಬರು ಅಭ್ಯರ್ಥಿಗಳು ಸಮಾನ ಮತಗಳನ್ನು ಪಡೆದಿದ್ದರು. ಲಾಟರಿ ಮೂಲಕ ಆಯ್ಕೆ ಮಾಡಿದಾಗ ವಾರ್ಡ್ ಸಂಖ್ಯೆ 11ರಲ್ಲಿ ಬಿಜೆಪಿ ಹಾಗೂ ವಾರ್ಡ್ ಸಂಖ್ಯೆ 15ರಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದರು.

ವಾರ್ಡ್ ಸಂಖ್ಯೆ 14ರ ಬಿಜೆಪಿ ಅಭ್ಯರ್ಥಿ ಕೇವಲ ಒಂದು ಮತದ ಅಂತರದಿಂದ ವಿಜೇತರಾದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !