ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

Last Updated 3 ಸೆಪ್ಟೆಂಬರ್ 2021, 11:00 IST
ಅಕ್ಷರ ಗಾತ್ರ

ಕಲಬುರ್ಗಿ: ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮಹಾಗಾಂವ ಗ್ರಾಮದ ಪ್ರಾಥಮಿಕ ‌ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಸಭೆ ನಡೆಸಿದರು.

ಸದಸ್ಯರು, ಕೃಷಿಕರೊಂದಿಗೆ ಸಂವಾದ ನಡೆಸಿದ ಅವರು, ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನವನ್ನು ಇಟ್ಟುಕೊಂಡು ಕೃಷಿ ಮೂಲಸೌಕರ್ಯ ನಿಧಿಯ ಅಡಿಯಲ್ಲಿ ₹ 1 ಲಕ್ಷ ಕೋಟಿ ಅನುದಾನವನ್ನು ಮೀಸಲಿಟ್ಟಿದೆ. ಇದರ ಉಪಯೋಗವನ್ನು ಎಲ್ಲ ಕೃಷಿಕರು ಪಡೆಯುವಂತೆ ಸಲಹೆ ನೀಡಿದರು.

ಕಲಬುರ್ಗಿ ಗ್ರಾಮೀಣ ಶಾಸಕ ಬಸವರಾಜ ‌ಮತ್ತಿಮೂಡ ಈ ಸಂದರ್ಭದಲ್ಲಿದ್ದರು.

ಕಾರ್ಯಕ್ರಮ ನಿಮಿತ್ತ ಬೀದರ್ ಗೆ ತೆರಳಿದ್ದ ಅವರು ಕಲಬುರ್ಗಿಗೆ ವಾಪಸಾಗುವ ಮಾರ್ಗಮಧ್ಯದಲ್ಲಿ ಮಹಾಗಾಂವಕ್ಕೆ ಭೇಟಿ ನೀಡಿದ್ದರು.

ಬೆಳಿಗ್ಗೆ ನಗರದ ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಸಂವಾದ ನಡೆಸಬೇಕಿತ್ತು. ಆದರೆ, ಸಮಯದ ಅಭಾವದಿಂದ ಸಂವಾದ ರದ್ದುಗೊಳಿಸಿ ಬೀದರ್ ಗೆ ತೆರಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT