ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ | ಕೃಷ್ಣಾ ನದಿಯಿಂದ ನೀರು ಬಿಡುಗಡೆಗೆ ಆದೇಶ

Last Updated 22 ಏಪ್ರಿಲ್ 2020, 13:29 IST
ಅಕ್ಷರ ಗಾತ್ರ

ಕಲಬುರ್ಗಿ: ನಗರಕ್ಕೆ ಪ್ರಸಕ್ತ ಬೇಸಿಗೆ ಸಂದರ್ಭದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ನೀಗಿಸಲು ಕೃಷ್ಣಾ ನದಿಯಿಂದ 0.10 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡುವಂತೆ ಕಲಬುರ್ಗಿ ಪ್ರಾದೇಶಿಕ ಆಯುಕ್ತ ಡಾ.ಎನ್‌.ವಿ.ಪ್ರಸಾದ್‌ ಅವರು ಕೃಷ್ಣಾ ಭಾಗ್ಯ ಜಲ ನಿಗಮದ ಕಾಲುವೆ ವಲಯ–2ರ ಮುಖ್ಯ ಎಂಜಿನಿಯರ್‌ಗೆ ಆದೇಶಿಸಿದ್ದಾರೆ.

ನಗರಕ್ಕೆ ನೀರು ಪೂರೈಕೆಯಾಗುವ ಸರಡಗಿ ಬ್ಯಾರೇಜ್‌ನಲ್ಲಿ ದಿನೇ ದಿನೇ ನೀರು ಕಡಿಮೆಯಾಗುತ್ತಿರುವುದರಿಂದ ನಗರಕ್ಕೆ ಮೇ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಲಿದ್ದು, ಸಿಂದಗಿ ತಾಲ್ಲೂಕಿನ ರಾಂಪೂರದ ಕಾಲುವೆಯಿಂದ ಜೇವರ್ಗಿ ತಾಲ್ಲೂಕಿನ ಕಲ್ಲೂರು ಬ್ಯಾರೇಜಿಗೆ ಹರಿಸಿ ಅಲ್ಲಿಂದ ಸರಡಗಿ ಬ್ಯಾರೇಜಿಗೆ ಪೂರೈಸಬೇಕು ಎಂದು ಕಲಬುರ್ಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಕಳೆದ ಏಪ್ರಿಲ್ 15ರಂದು ಪ್ರಾದೇಶಿಕ ಆಯುಕ್ತರಿಗೆ ಮನವಿ ಸಲ್ಲಿಸಿದ್ದರು.

ಈ ಕೋರಿಕೆ ಪತ್ರವನ್ನು ಆಧರಿಸಿ ಈ ಆದೇಶ ಹೊರಡಿಸಿದ್ದಾರೆ. ಮೇ 1ರಿಂದ ನೀರು ಬಿಡುಗಡೆ ಮಾಡಬೇಕು ಎಂದೂ ನಿರ್ದೇಶನ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT