ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ | ಬಿಜೆಪಿಗೆ ಮತ ಕೇಳುವ ನೈತಿಕತೆಯಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Published 1 ಮೇ 2024, 15:27 IST
Last Updated 1 ಮೇ 2024, 15:27 IST
ಅಕ್ಷರ ಗಾತ್ರ

ಚಿತ್ತಾಪುರ: ‘ಕಳೆದ ಐದು ವರ್ಷಗಳಲ್ಲಿ ಕಲಬುರಗಿ ಕ್ಷೇತ್ರದಲ್ಲಿ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿರುವ ಬಿಜೆಪಿಗೆ, ಸಂಸದ ಉಮೇಶ ಜಾಧವ ಅವರಿಗೆ ಮತ ಕೇಳುವ ನೈತಿಕತೆಯಿಲ್ಲ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

ಮತಕ್ಷೇತ್ರದ ಡೋಣಗಾಂವ, ಸಾತನೂರು, ದಿಗ್ಗಾಂವ ಗ್ರಾಮಗಳಲ್ಲಿ ಬುಧವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ಜನಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಕ್ಷೇತ್ರದ ಅಭಿವೃದ್ಧಿಯನ್ನೇ ಮರೆತ ಉಮೇಶ ಜಾಧವ ಅವರ ವಿರುದ್ಧ ಮತ ಹಾಕುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರನ್ನು ಗೆಲ್ಲಿಸಿ’ ಎಂದು ಕೋರಿದರು. 

ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮಾತನಾಡಿ, ‘ನನಗೆ ಆಶೀರ್ವಾದ ಮಾಡಿ ಕಲಬುರಗಿ ಕ್ಷೇತ್ರದ ಅಭಿವೃದ್ಧಿಗೆ ಅವಕಾಶ ಮಾಡಿಕೊಡಿ’ ಎಂದು ಕೋರಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ಶರಣಪ್ಪ ಸುಣಗಾರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ ಮರಗೋಳ, ಶಿವರುದ್ರ ಭೀಣಿ, ಚಂದ್ರಶೇಖರ ಸಾತನೂರು, ಸಾಹೇಬಗೌಡ ಪೊಲೀಸ್ ಪಾಟೀಲ್. ಶರಣಪ್ಪ ನಾಟಿಕಾರ, ಬಸವರಾಜ ಚಿನ್ನಮಳ್ಳಿ, ರಾಮಲಿಂಗ ಬಾನರ, ಶರಣಗೌಡ ಪಾಟೀಲ್, ಶಾಂತಣ್ಣ ಚಾಳಿಕಾರ, ಹಣಮಂತ ಸಂಕನೂರು, ನಿಂಗಣ್ಣ ಹಗೆಲೇರಿ, ಶರಣು ಡೋಣಗಾಂವ, ಕಾಶಪ್ಪ ಹಲಕರ್ಟಿ, ಮಲ್ಲು ಹೊನ್ನಪುರ, ಶರಣಪ್ಪ ಹೊನ್ನಪುರ, ದೇವಿಂದ್ರ ಜಡಿ, ಶ್ರೀಮಂತ ಗುತ್ತೆದಾರ್, ನಾಗಯ್ಯ ಗುತ್ತೆದಾರ್, ಲಕ್ಷ್ಮಿಕಾಂತ ಸಾಲಿ ಅನೇಕರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT