ಕಲಬುರಗಿ, ವಿಜಯಪುರ, ದಾವಣಗೆರೆ, ಶಿವಮೊಗ್ಗ, ಬೆಂಗಳೂರ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ. ಈ ವೇಳೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ. ಹೀಗಾಗಿ, ಕಲಬುರಗಿ ವಿಭಾಗ-2ರಿಂದ ಕಲಬುರಗಿಯಿಂದ ವಿಜಯಪುರ ಹಾಗೂ ಧಾರವಾಡಕ್ಕೆ ತೆರಳುವ ಅಭ್ಯರ್ಥಿಗಳಿಗಾಗಿ ಕಲಬುರಗಿ ಕೇಂದ್ರ ಬಸ್ ನಿಲ್ದಾಣದಿಂದ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.