ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ: ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಸಾವು

ಎಂಟು ತಿಂಗಳ ಗರ್ಭಿಣಿಯಾಗಿದ್ದ 13 ವರ್ಷದ ಬಾಲಕಿ
Published 28 ಜೂನ್ 2024, 20:47 IST
Last Updated 28 ಜೂನ್ 2024, 20:47 IST
ಅಕ್ಷರ ಗಾತ್ರ

ಕಲಬುರಗಿ: ನಗರದ ಸಬರ್ಬನ್‌ ಪೊಲೀಸ್ ಠಾಣೆಯ ಬಡಾವಣೆಯೊಂದರಲ್ಲಿ ಯುವಕನಿಂದ ಅತ್ಯಾಚಾರಕ್ಕೊಳಗಾಗಿ ಎಂಟು ತಿಂಗಳ ಗರ್ಭಿಣಿಯಾಗಿದ್ದ 13 ವರ್ಷದ ಬಾಲಕಿ ಶುಕ್ರವಾರ ಖಾಸಗಿ ಆಸ್ಪತ್ರೆಯಲ್ಲಿ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾಳೆ.

ಬಡ ಕುಟುಂಬಕ್ಕೆ ಸೇರಿದ ಬಾಲಕಿ ಮೇಲೆ ಅದೇ ಬಡಾವಣೆಯ ನಿವಾಸಿ ಸರ್ಫರಾಜ್ ಮಿರ್ಜಾ (30) ಎಂಬಾತ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ. ನಂತರದಲ್ಲೂ ಬೆದರಿಕೆ ಹಾಕಿ ಆಕೆ ಮೇಲೆ ಆಗಾಗ ಅತ್ಯಾಚಾರವೆಸಗಿದ್ದ. ಬಾಲಕಿ ಎಂಟು ತಿಂಗಳ ಗರ್ಭಿಣಿಯಾಗಿದ್ದಳು ಎಂದು ಆಕೆಯ ಕುಟುಂಬದ ಸದಸ್ಯರು ದೂರಿದ್ದಾರೆ ಎಂದು ಡಿಸಿಪಿ ಕನಿಕಾ ಸಿಕ್ರಿವಾಲ್ ಮಾಹಿತಿ ನೀಡಿದರು.

ಬಾಲಕಿ ಅಸ್ವಸ್ಥಗೊಂಡ ಕಾರಣ ಗುರುವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಮಧ್ಯಾಹ್ನ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ಡಿಸಿಪಿ ಕನಿಕಾ ಸಿಕ್ರಿವಾಲ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT