ಸೋಮವಾರ, ಮೇ 23, 2022
25 °C

ಬೈಕ್–ಕಾರು ಡಿಕ್ಕಿ: ಮದುಮಗ ಸೇರಿ ಇಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಜೇವರ್ಗಿ ತಾಲ್ಲೂಕಿನ ಜೇರಟಗಿ ಗ್ರಾಮದ ಬಳಿ ಗುರುವಾರ ಮಧ್ಯಾಹ್ನ ಬೈಕ್ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಯಡ್ರಾಮಿ ತಾಲ್ಲೂಕು ಕೋಣಶಿರಸಗಿ ಗ್ರಾಮದ ದೇವೇಂದ್ರಪ್ಪ (30) ಹಾಗೂ ವಸ್ತಾರಿ ಗ್ರಾಮದ ಗುರುರಾಜ (30) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇವೇಂದ್ರಪ್ಪ ಅವರ ಮದುವೆ ನಿಶ್ಚಯವಾಗಿತ್ತು. ಹಾಗಾಗಿ, ಸಂಬಂಧಿಕರಿಗೆ ಮದುವೆ ಆಹ್ವಾನ ಪತ್ರ ನೀಡಲು ಜೇರಟಗಿಯತ್ತ ತೆರಳುತ್ತಿದ್ದರು. ವಾಹನವೊಂದನ್ನು ಓವರ್ ಟೇಕ್ ಮಾಡಿಕೊಂಡು ಬಂದ ವಿಜಯಪುರ ಜಿಲ್ಲೆಗೆ ಸೇರಿದ ಕಾರು ಎದುರಿಗೆ ಬಂದ ಬೈಕ್‌ಗೆ ಡಿಕ್ಕಿ ಹೊಡೆಯಿತು. ಇದರಿಂದಾಗಿ ಒಬ್ಬರ ದೇಹವನ್ನು ಸುಮಾರು 300 ಮೀಟರ್ ದೂರದವರೆಗೆ ಎಳೆದುಕೊಂಡು ಹೋಗಿದ್ದರಿಂದ ಛಿದ್ರವಾಗಿದೆ.

ಕಾರು ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲೋಗಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು