ಮಂಗಳವಾರ, ಜೂನ್ 28, 2022
25 °C

ಅಫಜಲಪುರ ಸಮೀಪ ಮರಕ್ಕೆ ಡಿಕ್ಕಿ ಹೊಡೆದ ಕಾರು: ಐವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಫಜಲಪುರ (ಕಲಬುರಗಿ ಜಿಲ್ಲೆ): ಸಮೀಪದ ಅಫಜಲಪುರ- ಬಳೂರ್ಗಿ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಕಾರು ಮರಕ್ಕೆ ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. 

ಐವರಲ್ಲಿ ನಾಲ್ವರು ಹಿಳೆಯರು ಹಾಗೂ ಒಬ್ಬ ಪುರುಷ ಇದ್ದಾರೆ. ಎಲ್ಲರೂ ಮಹಾರಾಷ್ಟ್ರದ ಅಹಮದಾಬಾದ್ ನಗರದ ನಿವಾಸಿಗಳು.

ಶುಕ್ರವಾರ ನಸುಕಿನಲ್ಲಿ ದೇವಲಗಾಣಗಾಪುರಕ್ಕೆ ಬಂದಿದ್ದ ಇವರು ದತ್ತಾತ್ರೇಯರ ದರ್ಶನ ಪಡೆದು ಮರಳುತ್ತಿದ್ದರು. ಎದುರಿಗೆ ಬಂದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ, ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿ ಉರುಳಿತು. ಅವಘಡದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಶವಗಳನ್ನು ಹೊರತೆಗೆಯಲು ಮುಂದಾಗಿದ್ದಾರೆ. ಅಪಾರ ಜನ ಸೇರಿದ್ದರಿಂದ ಸಂಚಾರಕ್ಕೂ ಅಡಚಣೆ ಉಂಟಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು