ಬುಧವಾರ, ಅಕ್ಟೋಬರ್ 20, 2021
29 °C

ಕಲಬುರ್ಗಿ: ರಸ್ತೆ ಅಪಘಾತದಲ್ಲಿ ವಿ.ವಿ. ಕುಲಸಚಿವ ಲಿಂಗರಾಜ ಶಾಸ್ತ್ರಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಬೀದರ್ ಜಿಲ್ಲೆ ಬಸವಕಲ್ಯಾಣ ತಾಲ್ಲೂಕಿನ ಕಡೋಳ ಗ್ರಾಮದ ಬಳಿ ಭಾನುವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಲಬುರ್ಗಿಯ ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ (50) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಅವರ ಪತ್ನಿಗೆ ಗಾಯಗಳಾಗಿದ್ದು, ಇಬ್ಬರು ಪುತ್ರರು ಅಪಾಯದಿಂದ ಪಾರಾಗಿದ್ದಾರೆ.

ಭಾನುವಾರ ರಜೆ ಇದ್ದುದರಿಂದ ಬಸವ ಕಲ್ಯಾಣ ನೋಡಲು ಕುಟುಂಬ ಸದಸ್ಯರೊಂದಿಗೆ ತೆರಳಿದ್ದರು. ಊಟ ಮುಗಿಸಿಕೊಂಡು ವಾಪಸ್ ಬರುವ ಹೊತ್ತಿನಲ್ಲಿ ಶಾಸ್ತ್ರಿ ಅವರ ಪುತ್ರ ಕಾರು ಚಾಲನೆ ಮಾಡುತ್ತಿದ್ದ. ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆಯಿತು. ಚಾಲಕರ ಸೀಟಿನ ಪಕ್ಕದ ಸೀಟಿನಲ್ಲಿ ಕುಳಿತಿದ್ದುದರಿಂದ ಅದೇ ಭಾಗದಲ್ಲಿ ಡಿಕ್ಕಿ ಹೊಡೆದಿತ್ತು.

ಪ್ರಾಣ ಉಳಿಸದ ಏರ್‌ ಬ್ಯಾಗ್: ಕಾರು ಡಿಕ್ಕಿ ಹೊಡೆಯುತ್ತಿದ್ದಂತೆಯೇ ಏರ್‌ ಬ್ಯಾಗ್‌ಗಳು ತೆರೆದುಕೊಂಡಿವೆ. ಆದರೆ, ಶಾಸ್ತ್ರಿ ಅವರ ಜೀವವುಳಿದಿಲ್ಲ.

ಜೇನು ದಾಳಿ: ಅಪಘಾತ ಸಂಭವಿಸಿದ ಸ್ಥಳದಲ್ಲಿ ಜೇನು ಹುಳುಗಳಿದ್ದವು. ಅವು ಶಾಸ್ತ್ರಿ ಅವರ ಪತ್ನಿಗೆ ಕಚ್ಚಿವೆ. ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು