ಕಾಳಗಿ: ‘ಮುಂಗಾರು ಹಂಗಾಮಿನಲ್ಲಿ ಬಿತ್ತನೆ ತಯಾರಿ ನಡೆದಿದ್ದು ರಸಗೊಬ್ಬರ ಕೊರತೆ ಕಾಡುತ್ತಿದೆ. ಗೊಬ್ಬರದ ಅಭಾವದ ಮಧ್ಯೆ ಬೆಲೆ ಏರಿಕೆ ಅನ್ನದಾತರ ಮೇಲೆ ಬರೆ ಎಳೆದಿದೆ’ ಎಂದು ರೈತರು ಆಪಾದಿಸಿದ್ದಾರೆ.

ಶನಿವಾರ ಇಲ್ಲಿನ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವಿವಿಧ ಗ್ರಾಮಗಳ ರೈತರು ‘ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರಿಗೆ ರಸಗೊಬ್ಬರ ಪೂರೈಸುವಲ್ಲಿ ವಿಫಲವಾಗುತ್ತಿದೆ’ ಎಂದು ದೂರಿದರು.

‘ಕಳಪೆ ಮಟ್ಟದ ರಸಗೊಬ್ಬರ, ಬೀಜ ಕಾಳ ಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಳ್ಳಬೇಕು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ತಕ್ಷಣವೇ ಕಡಿವಾಣ ಹಾಕಬೇಕು. ವಿದ್ಯುತ್ ಕಣ್ಣಾಮುಚ್ಚಾಲೆ ಆಟ ತಪ್ಪಿಸಿ, ಖಾಸಗೀಕರಣ ಹಿಂಪಡೆಯಬೇಕು’ ಎಂದು ರೈತರು ಸರ್ಕಾರಕ್ಕೆ ಆಗ್ರಹಿಸಿದರು.

ಸರ್ಕಾರಕ್ಕೆ ಬರೆಯಲಾದ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರ್ ಪೃಥ್ವಿರಾಜ ಪಾಟೀಲ ಅವರಿಗೆ ಸಲ್ಲಿಸಲಾಯಿತು. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಪ್ರಮುಖರಾದ ಪರಮೇಶ್ವರ ಕಾಂತಾ, ದಿಲೀಪ್ ನಾಗೂರೆ, ಸಿದ್ದಪ್ಪ ಕಲಶೆಟ್ಟಿ ಅನೇಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-31-533782779

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.