ಕಾಳಗಿ: ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಈಚೆಗೆ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.

ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಘವೇಂದ್ರ ಗುತ್ತೇದಾರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಯುವನಿಧಿ ಹಾಗೂ ಶಕ್ತಿ ಯೋಜನೆಯ ಪ್ರಗತಿಯನ್ನು ಪರಿಶೀಲಿಸಲಾಯಿತು.

‘ಭಾಗ್ಯಜ್ಯೋತಿ ಉಚಿತ ವಿದ್ಯುತ್ ಬಳಕೆ ಇದ್ದರೂ ಜೆಸ್ಕಾಂನವರು ವಿನಾಕಾರಣ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ದಂಡ ವಿಧಿಸುತ್ತಿದ್ದಾರೆ. ಕಾಳಗಿಯಿಂದ ಕಲಬುರಗಿಗೆ ಸಂಚರಿಸಲು ಬಸ್ ಕೊರತೆ ಬಹಳಷ್ಟಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರಧಾನ್ಯ ಸಮಪರ್ಕವಾಗಿ ವಿತರಣೆಯಾಗುತ್ತಿಲ್ಲ’ ಎಂಬ ಹಲವಾರು ವಿಷಯಗಳು ಚರ್ಚೆಗೆ ಬಂದವು.

‘ಸರ್ಕಾರ ಜನತೆಗೆ ಕೊಟ್ಟಿರುವ ಭರವಸೆಯಂತೆ ಗ್ಯಾರಂಟಿ ಯೋಜನೆಗಳು ಪಾರದರ್ಶಕವಾಗಿ ಜನರಿಗೆ ತಲುಪಬೇಕು. ಏನೇ ಸಮಸ್ಯೆಯಿದ್ದಲ್ಲಿ ಸರಿಪಡಿಸೋಣ. ಆದರೆ, ವಿನಾಕಾರಣ ಜನತೆಗೆ ತೊಂದರೆ ಕೊಡುವುದು ಸರಿಯಲ್ಲ, ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು’ ಎಂದು ಸಭೆಯ ಅಧ್ಯಕ್ಷರು ತಾಕೀತು ಮಾಡಿದರು.

ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಇಒ ಬಸಲಿಂಗಪ್ಪ ಡಿಗ್ಗಿ, ಸಮಿತಿ ಸದಸ್ಯರಾದ ಶರಣು ಮಜ್ಜಗಿ, ಘುಡುಸಾಬ ಮಾಸ್ಟರ್, ಶರಣು ಹೆಬ್ಬಾಳ, ಪುಷ್ಪಾ ಚವ್ಹಾಣ, ಗೀತಾ ಸಿಂಗಶೆಟ್ಟಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-31-444240985

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.