ಶುಕ್ರವಾರ, ಜುಲೈ 30, 2021
22 °C

ಕಲಬುರ್ಗಿ: ಕಾಳಗಿ ಮಠದ ಶ್ರೀ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾಳಗಿ (ಕಲಬುರ್ಗಿ): ಪಟ್ಟಣದ ಸಂಸ್ಥಾನ ಹಿರೇಮಠದ ಪೀಠಾಧಿಪತಿ ಶಿವಬಸವ ಶಿವಾಚಾರ್ಯರು (45) ಸೋಮವಾರ ಬೆಳಿಗ್ಗೆ 9 ಗಂಟೆಗೆ ನಿಧನರಾದರು

ಮಠದಲ್ಲಿ ಹೃದಯಘಾತವಾಗಿ ಕುಸಿದುಬಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ‌ಅವರು  ನಿಧನ ರಾಗಿದ್ದನ್ನು ವೈದ್ಯರು ದೃಢ ಪಡಿಸಿದರು.

ಶ್ರೀಗಳು 25ವರ್ಷಗಳ ಹಿಂದೆ ಪೀಠ ಅಲಂಕರಿಸಿದರು. 2001ರಲ್ಲಿ ಶಿವಬಸವೇಶ್ವರ ದಕ್ಷಿಣಕಾಶಿ ವಿದ್ಯಾಭಿವೃದ್ಧಿ ಟ್ರಸ್ಟ್ ಎಂಬ ಶಿಕ್ಷಣಸಂಸ್ಥೆ ಹುಟ್ಟುಹಾಕುವ ಮೂಲಕ ಶಿಶುಮಂದಿರ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಯನ್ನು ಸ್ಥಾಪಿಸಿದ್ದರು. ಇಲ್ಲಿ ನೂರಾರು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ.

ಶ್ರೀಗಳ ಅಂತ್ಯಕ್ರಿಯೆ ಮಂಗಳವಾರ (ಜು.13) ಬೆಳಿಗ್ಗೆ 11ಗಂಟೆಗೆ ಧಾರ್ಮಿಕ ವಿಧಿವಿಧಾನಗಳ ಪ್ರಕಾರ ಜರುಗಲಿದೆ ಎಂದು ಸದ್ಭಕ್ತ ಮಂಡಳಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು