ಕಾಳಗಿ: ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕಾಳಗಿ ಪಟ್ಟಣದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಂಕಜಾ ಎ. ಸೂಚನೆ ನೀಡಿದ್ದಾರೆ.

‘ಸಾರ್ವಜನಿಕರ ಜೀವ ಮತ್ತು ಆಸ್ತಿಪಾಸ್ತಿಗಳ ರಕ್ಷಣೆಯ ಹಿತದೃಷ್ಟಿಯಿಂದ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಅಂಗನವಾಡಿ ಕೇಂದ್ರಗಳು ಮತ್ತು ಸರ್ಕಾರಿ ಕಟ್ಟಡಗಳು ಶಿಥಿಲಗೊಂಡಿದ್ದರೆ ಅಥವಾ ಕುಸಿದು ಬೀಳುವ ಸಂಭವವಿದ್ದರೆ ಅಂಥವುಗಳ ಬಗ್ಗೆ ಸಂಬಂಧಪಟ್ಟವರು ಮೇಲಧಿಕಾರಿಗಳಿಗೆ ಕೂಡಲೇ ವರದಿ ಸಲ್ಲಿಸಬೇಕು ಮತ್ತು ಬೇರೆ ಸುರಕ್ಷಿತ ಕಟ್ಟಡಗಳನ್ನು ಹೊಂದಿಸಿಕೊಳ್ಳಬೇಕು ಎಂದಿದ್ದಾರೆ.

ಖಾಸಗಿ ಮಳಿಗೆ, ಮನೆ, ವಾಣಿಜ್ಯ ಸಂಕೀರ್ಣಗಳು ಬಳಕೆಗೆ ಯೋಗ್ಯವಲ್ಲದಾಗಿದ್ದರೆ ಕಟ್ಟಡಗಳ ಮಾಲೀಕರು ಅಥವಾ ಬಳಕೆದಾರರು ಕಟ್ಟಡ ಖಾಲಿ ಮಾಡಬೇಕು. ದುರಸ್ತಿ ಕೈಗೊಂಡು ಅಥವಾ ಬೇರೆಡೆ ಸ್ಥಳಾಂತರ ಮಾಡಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-31-211470990

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.