ಕಾಳಗಿ: ತಾಲ್ಲೂಕಿನ ರಟಕಲ್ ಗ್ರಾಮದ ಮುರುಘೇಂದ್ರ ಶಿವಯೋಗಿಗಳ ವಿರಕ್ತಮಠದಲ್ಲಿ ನೀಲಕಂಠ ದೇವರ ನಿರಂಜನ ಚರ ಪಟ್ಟಾಧಿಕಾರ ಮಹೋತ್ಸವ ಏ.27ರಂದು ವಿಜೃಂಭಣೆಯಿಂದ ಜರುಗಲಿದೆ.

ಮಹೋತ್ಸವ ನಿಮಿತ್ತ ಗ್ರಾಮದಲ್ಲಿ ಒಂದು ತಿಂಗಳಿಂದ ಸಂಭ್ರಮದ ವಾತಾವರಣ ಮನೆಮಾಡಿದೆ. ಮಠದಲ್ಲಿ ಬೃಹತ್ ವೇದಿಕೆ ಸಿದ್ಧಗೊಂಡಿದೆ.

ವಿವಿಧ ಮಠಾಧೀಶರ ನೇತೃತ್ವದಲ್ಲಿ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರಿಂದ ಏ.13ರಂದು ಉದ್ಘಾಟನೆಗೊಂಡು, ಏ.25ರವರೆಗೆ ಸಾಗಿಬಂದ ಹಾನಗಲ್ಲ ಕುಮಾರ ಶಿವಯೋಗಿಗಳ ಪುರಾಣ ಕಾರ್ಯಕ್ರಮ ಅರಣ್ಯ ಸಚಿವ ಈಶ್ವರ ಖಂಡ್ರೆ, ಶಾಸಕ ಡಾ.ಅವಿನಾಶ ಜಾಧವ ಸಮ್ಮುಖದಲ್ಲಿ ಶನಿವಾರ ಮಹಾ ಮಂಗಲಗೊಂಡಿದೆ.

ಮಹಿಳೆಯರಿಗೆ ಉಡಿತುಂಬುವ ಕಾರ್ಯಕ್ರಮ, ರೈತರ ಹಿತಚಿಂತನೆ ಗೋಷ್ಠಿ, ಲಿಂಗದೀಕ್ಷೆ ಹಾಗೂ ಅಯ್ಯಾಚಾರ, ಉಚಿತ ಆರೋಗ್ಯ ತಪಾಸಣೆ ಶಿಬಿರ, ಷಟಸ್ಥಲ ಧ್ವಜಾರೋಹಣ ಭಕ್ತಸಮೂಹಕ್ಕೆ ಮೆರುಗು ನೀಡಿದೆ.

ಇಂದು ಬೆಳಿಗ್ಗೆ 5ಗಂಟೆಗೆ ಹುಲಸೂರಿನ ಶಿವಾನಂದ ಸ್ವಾಮೀಜಿ ಅವರಿಂದ ನೀಲಕಂಠ ದೇವರಿಗೆ ಚಿನ್ಮಯಾನುಗೃಹ ಷಟಸ್ಥಲ ಬ್ರಹ್ಮೋಪದೇಶ ನಡೆಯಲಿದೆ.

ಬೆಳಿಗ್ಗೆ 10.30ಕ್ಕೆ ವಿವಿಧ ಮಠಾಧೀಶರ, ಗಣ್ಯರ ಸಮ್ಮುಖದಲ್ಲಿ ಶ್ರೀಗಳ ಶೂನ್ಯ ಸಿಂಹಾಸನರೋಹಣ ಹಾಗೂ ಸಮಾಜ ಸೇವಾ ದೀಕ್ಷೆ ಸಮಾರಂಭದ ಧರ್ಮ ಸಭೆ ಜರುಗಲಿದೆ ಎಂದು ಪಟ್ಟಾಧಿಕಾರ ಮಹೋತ್ಸವ ಸಮಿತಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-31-1768318398

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.