ಬುಧವಾರ, ಸೆಪ್ಟೆಂಬರ್ 22, 2021
25 °C

ವಿಮಾನ ನಿಲ್ದಾಣಕ್ಕೆ ನ್ಯಾವಿಗೇಷನ್‌ ಸೌಲಭ್ಯ: ಸಚಿವ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ:‘ ಇಲ್ಲಿನ ವಿಮಾನ ನಿಲ್ದಾಣದಲ್ಲಿ ರಾತ್ರಿ ವಿಮಾನ ಇಳಿಸಲು ಅನುಕೂಲವಾಗುವಂಥ ‘ನ್ಯಾವಿಗೇಷನ್‌ ಸೌಲಭ್ಯ’ ಕಲ್ಪಿಸುವ ಯೋಚನೆ ಇದೆ’ ಎಂದು ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವ ವಿ.ಕೆ.ಸಿಂಗ್‌ ಭರವಸೆ ನೀಡಿದ್ದಾರೆ.

ಕಲಬುರ್ಗಿ ಸಂಸದ ಉಮೇಶ ಜಾಧವ ಅವರು, ಸಂಸತ್‌ನಲ್ಲಿ ಕೇಳಿದ ಚುಕ್ಕೆ ಇಲ್ಲದ ಲಿಖಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಕಲಬುರ್ಗಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣಗಳಲ್ಲಿ ಸದ್ಯಕ್ಕೆ ಹಗಲು ಲ್ಯಾಂಡಿಂಗ್‌ ಮಾತ್ರ ಇದೆ. ಅಲ್ಲಿ ರಾತ್ರಿ ಲ್ಯಾಂಡಿಂಗ್‌ ಸೌಲಭ್ಯ ನೀಡಬೇಕು ಎಂದು ಮೊದಲಿನಿಂದಲೂ ಬೇಡಿಕೆ ಇದೆ. ಇದಕ್ಕೆ ಪೂರಕವಾಗುವಂಥ ನ್ಯಾವಿಗೇಷನ್‌ ಸೌಲಭ್ಯವನ್ನು ಶೀಘ್ರ ಕಲ್ಪಿಸಲಾಗುವುದು’ ಎಂದು ಸಚಿವ ಉತ್ತರಿಸಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.