ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ | ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ: ಗರ್ಭಿಣಿ ಸೇರಿ 7 ಮಂದಿ ಸಾವು

Last Updated 27 ಸೆಪ್ಟೆಂಬರ್ 2020, 6:36 IST
ಅಕ್ಷರ ಗಾತ್ರ

ಕಲಬುರ್ಗಿ: ತಾಲ್ಲೂಕಿನ ಸಾವಳಗಿ ಕ್ರಾಸ್ ಹತ್ತಿರ, ಆಳಂದ ರಸ್ತೆಯಲ್ಲಿ ಭಾನುವಾರ ನಸುಕಿನಲ್ಲಿ, ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದು ಏಳು ಜನ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಇವರಲ್ಲಿಗರ್ಭಿಣಿ ಸೇರಿ ನಾಲ್ವರು ಮಹಿಳೆಯರು ಹಾಗೂ ಮೂವರು ಪುರುಷರ ಇದ್ದಾರೆ. ಎಲ್ಲರೂ ಆಳಂದ ತಾಲ್ಲೂಕಿನ ನಿವಾಸಿಗಳು.

ಗರ್ಭಿಣಿಯನ್ನು ಹೆರಿಗೆಗಾಗಿ ಕಲಬುರ್ಗಿಗೆ ಕರೆದುಕೊಂಡು ಬರುತ್ತಿದ್ದಾಗ ಈ ದುರಂತ ಸಂಭವಿಸಿವೆ.

ಗರ್ಭಿಣಿ ಇರ್ಫಾನಾ ಬೇಗಂ (25), ರುಬಿಯಾ ಬೇಗಂ (50), ಅಬೇದಾಬಿ ಬೇಗಂ (50), ಜಯಚುನಬಿ (60) ಹಾಗೂ ಮುನೀರ್ (28), ಮಹಮ್ಮದ್ ಅಲಿ (38), ಶೌಕತ್ ಅಲಿ (29) ಎಂಬುವವರೇ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಅಪಘಾತವಾದ ಕೆಲವೇ ಕ್ಷಣಗಳಲ್ಲಿ ಸಾವಳಗಿ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದರು. ಯಾರಾದರೂ ಬರಬೇಕಿದ್ದರೆ ಆಸ್ಪತ್ರೆಗೆ ಸೇರಿಸಬೇಕೆಂದು ಪ್ರಯತ್ನ ಮಾಡಿದರು. ಆದರೆ ಅಪಘಾತದ ಹೊಡೆತಕ್ಕೆ ಕಾರಿನಲ್ಲಿದ್ದ ಎಲ್ಲರ ದೇಹಗಳೂ ಸಿಕ್ಕಿಕೊಂಡಿದ್ದವು.

ಕೆಲ ಸಮಯದ ನಂತರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಗ್ರಾಮಸ್ಥರ ಸಹಾಯದಿಂದ ಕಾರ್ ಬಾಗಿಲುಗಳನ್ನು ಮುರಿದು ಶವಗಳನ್ನು ಹೊರತೆಗೆದರು.

ಕಲಬುರ್ಗಿ ನಗರ ಸಂಚಾರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT