ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಲಿಕೆ ಚುನಾವಣೆ: ಬಿಜೆಪಿಯಿಂದ ದರ್ಗಿ, ಕಾಂಗ್ರೆಸ್‌ನಿಂದ ಕಪನೂರ ನಾಮಪತ್ರ

Last Updated 23 ಮಾರ್ಚ್ 2023, 6:45 IST
ಅಕ್ಷರ ಗಾತ್ರ

ಕಲಬುರಗಿ: ಸುಮಾರು ನಾಲ್ಕೂವರೆ ವರ್ಷಗಳ ಬಳಿಕ ಇಲ್ಲಿನ ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಆಯ್ಕೆಗೆ ಕಾಲ ಕೂಡಿ ಬಂದಿದ್ದು, ಬಿಜೆಪಿಯಿಂದ ವಿಶಾಲ ದರ್ಗಿ, ಕಾಂಗ್ರೆಸ್ ನಿಂದ ಪ್ರಕಾಶ ಕಪನೂರ ನಾಮಪತ್ರ ಸಲ್ಲಿಸಿದ್ದಾರೆ.

ಉಪಮೇಯರ್ ಹುದ್ದೆಗೆ ಬಿಜೆಪಿಯಿಂದ ಶಿವಾನಂದ ಪಿಸ್ತಿ, ಜೆಡಿಎಸ್ ನಿಂದ ವಿಜಯಲಕ್ಷ್ಮಿ ರೆಡ್ಡಿ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿದೆ. ಇದಕ್ಕೂ ಮುನ್ನ ನೂತನ ಸದಸ್ಯರು ಪ್ರತಿಜ್ಞಾ ವಿಧಿ ಸ್ವೀಕರಿಸುವರು.

ಮತದಾನ ಹಕ್ಕನ್ನು ಹೊಂದಿರುವ ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅವರು ಗೈರಾಗಿದ್ದಾರೆ.

55 ಸದಸ್ಯ ಬಲದ ಮಹಾನಗರ ಪಾಲಿಕೆಯಲ್ಲಿ 27 ಕಾಂಗ್ರೆಸ್, 23 ಬಿಜೆಪಿ, ನಾಲ್ವರು ಜೆಡಿಸ್ ಹಾಗೂ ಒಬ್ಬ ಅಭ್ಯರ್ಥಿ ಪಕ್ಷೇತರರಾಗಿ ಆಯ್ಕೆಯಾಗಿದ್ದರು.

ವಯಸ್ಸಿನ ಬಗ್ಗೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಬಿಜೆಪಿಯ ಪ್ರಿಯಾಂಕಾ ಭೋಯಿ ಅವರನ್ನು ನ್ಯಾಯಾಲ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದೆ.

ಪಾಲಿಕೆ ಸದಸ್ಯರು ಹಾಗೂ ಜನಪ್ರತಿನಿಧಿಗಳ ಮತಗಳು ಸೇರಿದರೆ 68 ಜನ ಸದಸ್ಯರಾಗಲಿದ್ದು, ಸರಳ‌ ಗೆಲುವಿಗೆ 35 ಮತಗಳು ಬೇಕಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT