ಮಂಗಳವಾರ, ಜೂನ್ 15, 2021
24 °C

ಕಲಬುರ್ಗಿ: ತುಂತುರು ಮಳೆಯಲ್ಲಿ‌ ಸ್ವಾತಂತ್ರ್ಯ ಸಂಭ್ರಮ‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲಾಯಿತು. 

ಕೈಮಗ್ಗ ಮತ್ತು ಜವಳಿ‌ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ‌ ಸಚಿವ‌ ಶ್ರೀಮಂತ ಬಾಳಾಸಾಹೇಬ ಪಾಟೀಲ‌ ಅವರು ಧ್ವಜಾರೋಹಣ ನೆರವೇರಿಸಿದರು.

ಧ್ವಜಾರೋಹಣ ನೆರವೇರುತ್ತಿದ್ದಂತೆ ರಾಷ್ಟ್ರಗೀತೆ ಹಾಗೂ ರೈತಗೀತೆ ಹಾಡಲಾಯಿತು. ಸಚಿವರು ಕವಾಯತು ತಂಡಗಳ ಪರಿವೀಕ್ಷಣೆ ಮಾಡಿ‌ದರು. ವಿವಿಧ ಇಲಾಖೆಗಳಿಂದ ಸ್ಥಬ್ಧಚಿತ್ರಗಳ ಪ್ರದರ್ಶನ ನಡೆಯಿತು. 

ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶ ಇರಲಿಲ್ಲ. ಕೋವಿಡ್ ಯೋಧರು ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇಡೀ ಕಾರ್ಯಕ್ರಮ‌ ಜಿಟಿ ಜಿಟಿ ಮಳೆಯಲ್ಲೇ ನಡೆಯಿತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು