ಕಾಳಗಿ: ತಾಲ್ಲೂಕಿನ ವಿವಿಧೆಡೆ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರು ಗುರುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ತಾಲ್ಲೂಕು ಪಂಚಾಯಿತಿ ಕಚೇರಿ ಹಿಂಭಾಗದಲ್ಲಿ ನಿರ್ಮಿಸುತ್ತಿರುವ ಪಂಚಾಯಿತಿ ಸಭಾಂಗಣ ವೀಕ್ಷಿಸಿ, ಕಾಮಗಾರಿ ಕುರಿತು ಮಾಹಿತಿ ಪಡೆದರು. ಕೋಡ್ಲಿ ತಾಂಡಾ, ಪಸ್ತಾಪುರ, ಹೊಸಳ್ಳಿ.ಎಚ್., ತೇಗಲತಿಪ್ಪಿ ಮತ್ತು ಗಡಿಕೇಶ್ವಾರ ಗ್ರಾಮಕ್ಕೆ ಭೇಟಿ ನೀಡಿ, ಕುಡಿಯುವ ನೀರಿನ ಜಲಜೀವನ್ ಮಿಷನ್ ಕಾಮಗಾರಿ ಪರಿಶೀಲಿಸಿದರು.

ಕೋಡ್ಲಿ ತಾಂಡಾದಲ್ಲಿ ನಳಗಳು ಕಿತ್ತು ಹೋಗಿರುವುದನ್ನು ಕಂಡು ಸಂಬಂಧಪಟ್ಟ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಬಳಿಕ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ, ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದರು.

‘ಅಡುಗೆ ಸಿಬ್ಬಂದಿಗಳು ಸ್ವಚ್ಛತೆ ಕಾಪಾಡಬೇಕು. ಮಕ್ಕಳಿಗೆ ಸರಿಯಾದ ಅಡುಗೆ ತಯಾರಿಸಿ ಬಡಿಸಬೇಕು. ಎಸ್ಎಸ್ಎಲ್ಸಿ ಪರೀಕ್ಷೆಯ ಗುಣಮಟ್ಟದ ಫಲಿತಾಂಶಕ್ಕೆ ಶಿಕ್ಷಕರು ಶ್ರಮಿಸಬೇಕು’ ಎಂದು ತಿಳಿಸಿದರು.

ಕಾಳಗಿ ತಾಲ್ಲೂಕು ಪಂಚಾಯಿತಿ ಇಒ ಬಸಲಿಂಗಪ್ಪ ಡಿಗ್ಗಿ, ಆರ್ಡಬ್ಲ್ಯೂಎಸ್ ಎಇಇ ಪ್ರವೀಣ, ಜೆಇ ಯುವರಾಜ್ ರಾಠೋಡ, ಪಿಡಿಒ ಗಳಾದ ಮಹಾನಂದ ಗುತ್ತೇದಾರ, ದೇವಿಂದ್ರ, ಸೋಮಶೇಖರ ಸೇರಿದಂತೆ ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿದ್ದರು.

ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಸಿಇಒ ಜೆಇ ವಿರುದ್ಧ ವರದಿ ಸಲ್ಲಿಸಲು ಸೂಚನೆ ಎಸ್ಎಸ್ಎಲ್ಸಿ ಗುಣಮಟ್ಟದ ಫಲಿತಾಂಶಕ್ಕೆ ಶ್ರಮಿಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.