ಕಲಬುರಗಿ: ‘ನೂತನ ಸಚಿವರ ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕನಿಷ್ಠ ಎಂಟಕ್ಕೂ ಹೆಚ್ಚಿನ ಸಚಿವ ಸ್ಥಾನಗಳನ್ನು ನೀಡಬೇಕು’ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಗೌರವಾಧ್ಯಕ್ಷ ಬಸವರಾಜ ದೇಶಮುಖ, ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಕಾಂಗ್ರೆಸ್ ಹೈಕಮಾಂಡ್ಗೆ ಒತ್ತಾಯಿಸಿದ್ದಾರೆ.

ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಗೆ ನೀರಾವರಿ, ಲೋಕೋಪಯೋಗಿ, ಕೈಗಾರಿಕೆ, ಶಾಲಾ ಶಿಕ್ಷಣ, ಯೋಜನಾ, ಆರೋಗ್ಯ ಮತ್ತು ವೈದ್ಯಕೀಯ, ಉನ್ನತ ಶಿಕ್ಷಣ, ಪ್ರವಾಸೋದ್ಯಮ ಸೇರಿದಂತೆ ಅಭಿವೃದ್ಧಿಗೆ ಪೂರಕವಾದ ಸ್ಥಾನಗಳನ್ನು ನೀಡಲು ಆಗ್ರಹಿಸಿದ್ದಾರೆ.

‘ಗೋವಿಂದರಾವ್ ಸಮಿತಿ ವರದಿಯನ್ನು ಆಧಾರವಾಗಿಟ್ಟುಕೊಂಡು ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಮತ್ತು 371 (ಜೆ) ಕಲಂ ಪರಿಣಾಮಕಾರಿ ಅನುಷ್ಠಾನದ ಜೊತೆಗೆ ಜನಮಾನಸದ ಬೇಡಿಕೆಯಾದ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾನ ನೀಡಬೇಕು. ಈ ಸಚಿವಾಲಯವನ್ನು ಕಲ್ಯಾಣದ ಸಚಿವರಿಗೆ ವಹಿಸಬೇಕು. ಒಟ್ಟಾರೆ ಕಲ್ಯಾಣ ಕರ್ನಾಟಕ ಪ್ರದೇಶದ ಹಿಂದುಳಿಯುವಿಕೆಯನ್ನು ಗಮನದಲ್ಲಿಟ್ಟುಕೊಂಡು ಈ ಪ್ರದೇಶದ ರಚನಾತ್ಮಕ ಪ್ರಗತಿಗೆ ಪ್ರಬಲ ಖಾತೆಗಳನ್ನು ಕಲ್ಯಾಣಕ್ಕೆ ನೀಡಬೇಕು. ಈ ಪ್ರದೇಶದ ರಚನಾತ್ಮಕ ಪ್ರಗತಿಯ ಬಗ್ಗೆ ಸಂಪೂರ್ಣ ಮಾಹಿತಿ ಮತ್ತು ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಳ ಮಾಹಿತಿ ಇರುವ ರಾಷ್ಟ್ರ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ವಿಷಯಕ್ಕೆ ಸಂಬಂಧಿಸಿ ಗಂಭೀರವಾಗಿ ಪರಿಗಣಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-34-1665081530

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.