ಕಲಬುರಗಿ: ರಾಜ್ಯ ಸರ್ಕಾರ ರಚನೆ ಮಾಡಿರುವ ಗೋವಿಂದರಾವ ನೇತೃತ್ವದ ಪ್ರಾದೇಶಿಕ ಅಸಮತೋಲನಾ ನಿವಾರಣಾ ಸಮಿತಿ ವರದಿ ಹಿನ್ನೆಲೆಯಲ್ಲಿ ಇಲ್ಲಿನ ಶರಣಬಸವೇಶ್ವರ ದಾಸೋಹ ಮಹಾಮನೆಯ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಕೋರ್ ಕಮಿಟಿಯ ಪರಾಮರ್ಶನ ಸಭೆ ನಡೆಯಿತು.

‘ಗೋವಿಂದರಾವ ವರದಿಯ ಸಾಧಕ–ಬಾಧಕಗಳ ಬಗ್ಗೆ ಚರ್ಚಿಸಿ ಸರ್ವಾನುಮತದ ನಿರ್ಣಯದಂತೆ ಆದಷ್ಟು ಶೀಘ್ರ ಕಲ್ಯಾಣ ಕರ್ನಾಟಕ ಪ್ರದೇಶದ ಸರ್ವಾಂಗೀಣ ಕಾಲಮಿತಿಯ ಅಭಿವೃದ್ಧಿ ಕುರಿತು ಶಿಕ್ಷಣ ಸಂಸ್ಥೆಗಳ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗುವುದು’ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಗೌರವ ಅಧ್ಯಕ್ಷ ಬಸವರಾಜ ದೇಶಮುಖ, ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ತಿಳಿಸಿದರು.

ವರದಿಯಲ್ಲಿ ಕಲ್ಯಾಣ ಕರ್ನಾಟಕ ಮಾನವ ಅಭಿವೃದ್ಧಿ ಮತ್ತು ಇತರೆ ಕ್ಷೇತ್ರಗಳಲ್ಲಿ ಅತ್ಯಂತ ಹಿಂದುಳಿದಿರುವುದರ ಬಗ್ಗೆ ಉಲ್ಲೇಖಿಸಿದ್ದನ್ನು ಈ ಭಾಗದ ಸಚಿವರು, ಸಂಸದರು, ಶಾಸಕರು, ಗಂಭೀರವಾಗಿ ಪರಿಗಣಿಸಬೇಕು ಎಂದು ಸಮಿತಿಯ ಬಸವರಾಜ ದೇಶಮುಖ ತಿಳಿಸಿದರು.

ಪ್ರೊ. ಆರ್.ಕೆ.ಹುಡಗಿ, ಪ್ರಾದೇಶಿಕ ಅಸಮತೋಲನಾ ನಿವಾರಣಾ ಸಮಿತಿಯ ಸದಸ್ಯೆ ಸಂಗೀತಾ ಕಟ್ಟಿಮನಿ, ಪ್ರೊ. ಸನಾವುಲ್ಲಾ, ಎಂ.ಬಿ.ನಿಂಗಪ್ಪ ಮಾತನಾಡಿ, ‘ಕಲ್ಯಾಣ ಕರ್ನಾಟಕದ ಸರ್ವಾಂಗಿಣ ಅಭಿವೃದ್ಧಿಗೆ ಕಾಲಮಿತಿಯ ಕ್ರಿಯಾ ಯೋಜನೆ ಹಮ್ಮಿಕೊಳ್ಳುವುದು ಅತಿ ಅವಶ್ಯ. ಈ ನಿಟ್ಟಿನಲ್ಲಿ ಕಲ್ಯಾಣದ ಜನಪ್ರತಿನಿಧಿಗಳನ್ನು ಒಳಗೊಂಡ ದುಂಡು ಮೇಜಿನ ಸಭೆಗಳು ಮತ್ತು ಬೃಹತ್ ವಿಚಾರ ಸಂಕಿರಣಗಳನ್ನು ನಡೆಸಿ ಸರ್ಕಾರದ ಮೇಲೆ ಒತ್ತಡ ತರಬೇಕು’ ಎಂದು ಹೇಳಿದರು.

ಲಕ್ಷ್ಮಣ ದಸ್ತಿ ಮಾತನಾಡಿ, ‘ಅಧಿಕಾರಿಗಳ ನಿರ್ಲಕ್ಷ್ಯದಿಂದ ನೇಮಕಾತಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಮುಂಬಡ್ತಿಗಳು ಸಹ ಸಹಜ ಪ್ರಕ್ರಿಯೆಯಂತೆ ನಡೆಯದೆ ತೊಂದರೆ ಉಂಟಾಗುತ್ತಿದೆ. ಇದನ್ನು ಜನಪ್ರತಿನಿಧಿಗಳು ಗಂಭೀರವಾಗಿ ಪರಿಗಣಿಸಬೇಕು’ ಎಂದರು.

ಗೌರವ ಡಾಕ್ಟರೇಟ್ ಪದವಿ ಪಡೆದ ಸಂಗೀತಾ ಕಟ್ಟಿಮನಿ, ಬಸವಶ್ರೀ ಪ್ರಶಸ್ತಿ ಪಡೆದ ಪ್ರೊ.ಆರ್.ಕೆ. ಹುಡಗಿ ಅವರನ್ನು ಸನ್ಮಾನಿಸಲಾಯಿತು.

ಕೈಲಾಸನಾಥ ದೀಕ್ಷಿತ್, ಅಬ್ದುಲ್ ರಹೀಂ, ಕೆ.ಎಂ. ಬಿರಾದಾರ, ರೌಫ್ ಖಾದ್ರಿ, ಅಸ್ಲಂ ಚೌಂಗೆ, ಶರಣಗೌಡ ಪಾಟೀಲ ಪಾಳಾ, ವಿಜಯಕುಮಾರ ದೇಶಪಾಂಡೆ, ಶ್ರೀಕಾಂತ ಪಾಟೀಲ, ಮುತ್ತಣ್ಣ ನಡಗೇರಿ, ವಿಶ್ವನಾಥ ಬಿರಾದಾರ, ರವೀಂದ್ರ ಬಿರಾದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-34-507552731

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.