ಕಲಬುರ್ಗಿ: ನಗರದಲ್ಲಿ ಭಾನುವಾರ ಕನ್ನಡ ರಾಜ್ಯೋತ್ಸವ ಬಹಿಷ್ಕರಿಸಿ,ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಮಾಡಲು ಯತ್ನಿಸಿದ ಹತ್ತು ಮಂದಿಯನ್ನು ಪೊಲೀಸರು ಸಂಬಂಧಿಸಿದರು.

ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಸೇರಿದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಸದಸ್ಯರು ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿ ಬಂಧನಕ್ಕೊಳಗಾದರು.

'ಯಾವುದೇ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಕಲ್ಯಾಣ ಕರ್ನಾಟಕ ಭಾಗವನ್ನು ಪದೇ ಪದೇ ನಿರ್ಲಕ್ಷಿಸಲಾಗುತ್ತಿದೆ. ನಮಗೆ ಪ್ರತ್ಯೇಕ ರಾಜ್ಯ ಬೇಕು' ಎಂದು ಘೋಷಣೆ ಕೂಗಿದರು.

ಈ ವೇಳೆ ಎಂ.ಎಸ್.ಪಾಟೀಲನರಿಬೋಳ ಸೇರಿದಂತೆ ಹತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದರು.

ಪದೇ ಪದೇ ಈ ಭಾಗಕ್ಕೆ ಅನ್ಯಾಯವಾಗುತ್ತಿದೆ, ಕಲ್ಯಾಣ ಕರ್ನಾಟಕ ಭಾಗಕ್ಕೆ ರಾಜ್ಯ ಸರ್ಕಾರದಿಂದ ಮಲತಾಯಿ ಧೋರಣೆ ಮುಂದುವರಿಸಲಾಗುತ್ತಿದೆ. ಸಚಿವ ಸ್ಥಾನದಿಂದಲೂ ಈ ಭಾಗವನ್ನ ವಂಚಿಸಲಾಗಿದೆ. ಸಂವಿಧಾನದ ಕಲಂ 371ಕ್ಕೆ ತಿದ್ದುಪಡಿ ತಂದರೂ ಪ್ರಯೋಜನವಿಲ್ಲ. ಅನ್ಯಾಯದ ಮೇಲೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತ್ಯೇಕ ರಾಜ್ಯಕ್ಕೆ ಒತ್ತಾಯಿಸಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೂ ಸ್ಪರ್ಧೆ ಮಾಡಲಾಗುವುದು ಎಂದು ಸಮಿತಿ ಅದ್ಯಕ್ಷ ಎಂ.ಎಸ್. ಪಾಟೀಲ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.