ಸಚಿವಾಲಯ ಸ್ಥಾಪನೆಯಾಗಿರುವುದರಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತಷ್ಟು ಅಭಿವೃದ್ಧಿಗೆ ಸಾಧ್ಯವಾಗಲಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಕಾಮಗಾರಿಗಳನ್ನು ಸಕಾಲದಲ್ಲಿ ಪೂರೈಸುವ ಸಲುವಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗೆ ಹೆಚ್ಚುವರಿ ಹುದ್ದೆಗಳನ್ನು ಸೃಷ್ಟಿಸುವ ಮೂಲಕ ಈ ಕಚೇರಿಗಳನ್ನು ಮತ್ತಷ್ಟು ಬಲಪಡಿಸಲೂ ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ.ಪ್ರಿಯಾಂಕ್ ಖರ್ಗೆ ಜಿಲ್ಲಾ ಉಸ್ತುವಾರಿ ಸಚಿವ
ಕಳೆದ ವರ್ಷ ಮುಖ್ಯಮಂತ್ರಿ ಅವರು ಪ್ರತ್ಯೇಕ ಸಚಿವಾಲಯ ರಚಿಸುವ ಭರವಸೆ ನೀಡಿದ್ದರು. ಅದನ್ನು ಈಗ ಈಡೇರಿಸಿದ್ದಾರೆ. ಇದರಿಂದಾಗಿ ಈ ಭಾಗದಲ್ಲಿ ಅಭಿವೃದ್ಧಿ ಚಟುವಟಿಕೆಗಳು ವೇಗ ಪಡೆದುಕೊಳ್ಳಲಿವೆ. ನೀತಿ ನಿರೂಪಣೆಗಳನ್ನು ಸಚಿವಾಲಯವೇ ಸ್ವತಂತ್ರವಾಗಿ ತೆಗೆದುಕೊಳ್ಳಲಿದೆ. ನಮ್ಮ ಸರ್ಕಾರ ಈ ಭಾಗದ ಜನತೆಗೆ ಮಹತ್ವದ ಕೊಡುಗೆ ನೀಡಿದಂತಾಗಿದೆ.ಡಾ.ಅಜಯ್ ಸಿಂಗ್ ಅಧ್ಯಕ್ಷ ಕೆಕೆಆರ್‌ಡಿಬಿ
ಪ್ರತ್ಯೇಕ ಸಚಿವಾಲಯವು ಸ್ವಾಗತಾರ್ಹ ಕ್ರಮ. ನಮ್ಮ ಜಿಲ್ಲಾ ಕೇಂದ್ರಗಳಷ್ಟೇ ಅಲ್ಲದೇ ಅತ್ಯಂತ ಕುಗ್ರಾಮಗಳ ಸಮಸ್ಯೆಗಳ ಬಗ್ಗೆಯೂ ಸಚಿವಾಲಯದ ಮುಖ್ಯಸ್ಥರು ಗಮನ ಹರಿಸಲು ಸಾಧ್ಯವಾಗಲಿದೆ. ಶಾಲೆ ಅಂಗನವಾಡಿ ಆರೋಗ್ಯ ಕೇಂದ್ರಗಳು ಆಂಬುಲೆನ್ಸ್‌ನಂತಹ ಬೇಡಿಕೆಗಳಿಗೆ ತಕ್ಷಣ ಸ್ಪಂದಿಸಲು ಸಾಧ್ಯವಾಗುತ್ತದೆ. ಮಾನವ ಅಭಿವೃದ್ಧಿ ಪ್ರಾದೇಶಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಗಟ್ಟಿಯಾದ ಕಾರ್ಯ ಯೋಜನೆ ರೂಪಿಸಬೇಕು. ಸಚಿವಾಲಯಕ್ಕೆ ಘೋಷಣೆಯಾಗುವ ಅನುದಾನ ಸಕಾಲಕ್ಕೆ ಬಿಡುಗಡೆಯಾಗಬೇಕು. ವಿವಿಧ ಇಲಾಖೆಗಳನ್ನೊಳಗೊಂಡ ತಜ್ಞರ ಸಮಿತಿ ಮೇಲ್ವಿಚಾರಣಾ ಸಮಿತಿ ಹಾಗೂ ಕಾಮಗಾರಿಗಳು ಅನುಷ್ಠಾನಗೊಂಡ ಬಗ್ಗೆ ಪರಿಶೀಲನಾ ಸಮಿತಿಯನ್ನು ರಚಿಸಬೇಕು.ಸಂಗೀತಾ ಕಟ್ಟಿಮನಿ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸದಸ್ಯೆ
ಸರ್ಕಾರದ ಈ ತೀರ್ಮಾನವನ್ನು ಕೆಕೆಸಿಸಿಐ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರಕ ನಿರ್ಧಾರವನ್ನು ಕೈಗೊಳ್ಳಬೇಕು. ಇಷ್ಟಾಗಿಯೂ ಅಭಿವೃದ್ಧಿ ಆಗದಿದ್ದರೆ ಪ್ರತ್ಯೇಕ ರಾಜ್ಯದ ಹೋರಾಟವನ್ನು ಪ್ರಾರಂಭಿಸುವುದು ಅನಿವಾರ್ಯವಾಗುತ್ತದೆ.ಶರಣಬಸಪ್ಪ ಪಪ್ಪಾ ಕೆಕೆಸಿಸಿಐ ಅಧ್ಯಕ್ಷ
ಪ್ರತ್ಯೇಕ ಸಚಿವಾಲಯ ರಚಿಸುವ ತೀರ್ಮಾನವನ್ನು ಕೈಗೊಳ್ಳುವ ಮೂಲಕ ಸರ್ಕಾರ ನಮ್ಮ ದಶಕಗಳ ಬೇಡಿಕೆಗೆ ಸ್ಪಂದಿಸಿದಂತಾಗಿದೆ. ಇದರಿಂದಾಗಿ ಪ್ರತಿಯೊಂದು ಕೆಲಸಕ್ಕೂ ಬೆಂಗಳೂರಿಗೆ ಅಲೆಯುವುದು ತಪ್ಪುತ್ತದೆ. ನೀರಾವರಿ ಕೈಗಾರಿಕೆಗೆ ಸಂಬಂಧಿಸಿದ ಬೇಡಿಕೆಗಳಿಗೆ ಮುಖ್ಯಮಂತ್ರಿ ಸ್ಪಂದಿಸಬಹುದು. 371 (ಜೆ)ಗೆ ಸಂಬಂಧಿಸಿದಂತೆ ಸಚಿವಾಲಯವೇ ಸ್ವತಂತ್ರವಾಗಿ ಸುತ್ತೋಲೆಗಳನ್ನು ಹೊರಡಿಸಬಹುದು.ಲಕ್ಷ್ಮಣ ದಸ್ತಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ
ಯಾವಾಗಲೋ ಆಗಬೇಕಿದ್ದ ಘೋಷಣೆ 371 (ಜೆ) ಕಲಂ ಜಾರಿಗೆ ಬಂದ 15 ವರ್ಷಗಳ ಬಳಿಕವಾದರೂ ಆಗುತ್ತಿರುವುದು ಸ್ವಾಗತಾರ್ಹ. ಇದರೊಂದಿಗೆ ಉದ್ಯೋಗ ಸೃಷ್ಟಿಗೂ ಸರ್ಕಾರ ಆದ್ಯತೆ ನೀಡಬೇಕು. ಜಿಲ್ಲೆಯವರೇ ಆದ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿಯಲ್ಲಿ ಸೆಮಿಕಂಡಕ್ಟರ್ ಉತ್ಪಾದನಾ ಘಟಕ ಆರಂಭಿಸಬೇಕು.ಸುನೀಲ ಕುಲಕರ್ಣಿ ಸಂಚಾಲಕ ಕಲ್ಯಾಣ ಕರ್ನಾಟಕ ಗ್ರಾಹಕ ವೇದಿಕೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.