ಕಲಬುರಗಿ: ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಕಳವು ಪ್ರಕರಣಗಳು ಹೆಚ್ಚುತ್ತಿವೆ. ಇದು ಜನರ ನೆಮ್ಮದಿ ಕಿತ್ತು ಕೊಳ್ಳುತ್ತಿದೆ. ನಗದು, ಆಭರಣ, ವಾಹನ ಕಳೆದುಕೊಂಡವರು ಪೊಲೀಸ್ ಠಾಣೆಗಳಿಗೆ ಎಡತಾಕುವುದು ಸಾಮಾನ್ಯವಾಗಿದೆ.

2024ರ ಜನವರಿಯಿಂದ 2025ರ ನವೆಂಬರ್ 3ರವರೆಗೂ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಠಾಣೆಗಳಲ್ಲಿ 4,797 ಕಳವು ಪ್ರಕರಣಗಳು ದಾಖಲಾಗಿವೆ. ಇವು ದರೋಡೆ, ವಾಹನ ಕಳವು, ಸರಗಳವು, ರೈತರ ಕೃಷಿ ಪರಿಕರ, ಚಾಕು ತೋರಿಸಿ ಕಳವು ಹಾಗೂ ಮನೆಗಳಲ್ಲಿ ನಡೆದ ಕಳವು ಪ್ರಕರಣಗಳನ್ನೂ ಒಳಗೊಂಡಿವೆ.

2024ರಲ್ಲಿ 2,693 ಹಾಗೂ 2025ರ ನವೆಂಬರ್ 3ರವರೆಗೂ 2,104 ಪ್ರಕರಣಗಳು ದಾಖಲಾಗಿವೆ. 2024ರಲ್ಲಿ 110 ಹಾಗೂ ನವೆಂಬರ್ 3ರವರೆಗೂ 30 ದರೋಡೆ ಪ್ರಕರಣಗಳು ದಾಖಲಾಗಿವೆ.

ಎರಡು ಜಿಲ್ಲೆಗಳಲ್ಲಿ ಹೆಚ್ಚು: ಮಹಾರಾಷ್ಟ್ರ, ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಕಲಬುರಗಿ ಹಾಗೂ ಆಂಧ್ರಪ್ರದೇಶ, ತೆಲಂಗಾಣದೊಂದಿಗೆ ಗಡಿ ಹಂಚಿಕೊಂಡಿರುವ ರಾಯಚೂರು ಜಿಲ್ಲೆಯಲ್ಲಿ ಕಳವು ಹಾಗೂ ದರೋಡೆ ಪ್ರಕರಣಗಳು ಹೆಚ್ಚುತ್ತಿವೆ.

ಈ ಅವಧಿಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ 1,365 ಹಾಗೂ ರಾಯಚೂರು ಜಿಲ್ಲೆಯಲ್ಲಿ 1,082 ಪ್ರಕರಣಗಳು ದಾಖಲಾಗಿವೆ. ಬಳ್ಳಾರಿಯಲ್ಲಿ 578, ಬೀದರ್ 553, ಯಾದಗಿರಿ 352, ಕೊಪ್ಪಳ 455, ವಿಜಯನಗರದಲ್ಲಿ 412 ಪ್ರಕರಣಗಳು ದಾಖಲಾಗಿವೆ.

ವಾಹನ ಕಳವು: 2025ರ ಜನವರಿಯಿಂದ ನವೆಂಬರ್ 3ರವರೆಗೂ 110 ವಾಹನ ಕಳವು ಪ್ರಕರಣಗಳು ದಾಖಲಾಗಿವೆ.

‘ವಾಹನ ಕಳವು ಪ್ರಕರಣಗಳಲ್ಲಿ ಪೊಲೀಸರು ಬೇಗ ಪ್ರಕರಣ ದಾಖಲಿಸಿಕೊಳ್ಳುವುದಿಲ್ಲ. ದಾಖಲಿಸಿಕೊಂಡ ನಂತರವೂ ಗಂಭೀರವಾಗಿ ವಾಹನ ಪತ್ತೆ ಕಾರ್ಯದಲ್ಲಿ ತೊಡಗುವುದಿಲ್ಲ. ವಾಹನ ಕಳೆದುಕೊಂಡ ಹಲವರು ಠಾಣೆಗೆ ಅಲೆದಾಡಿ ಸುಸ್ತಾಗಿ ಕೊನೆಗೆ ಹೋಗುವುದನ್ನೇ ಬಿಟ್ಟು ಬಿಡುತ್ತಾರೆ’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ವಾಹನ ಕಳೆದುಕೊಂಡ ಹೀರಾಪುರದ ನಿವಾಸಿಯೊಬ್ಬರು ಆರೋಪಿಸಿದರು.

ಬೆಚ್ಚಿ ಬೀಳಿಸಿದ್ದ ದರೋಡೆ: 2025ರ ಜನವರಿಯಲ್ಲಿ ಬೀದರ್ ನಗರದಲ್ಲಿ ಹಾಡಹಗಲೇ ನಡೆದಿದ್ದ ದರೋಡೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು.

ಎಟಿಎಂಗೆ ಜಮಾ ಮಾಡಲು ಬ್ಯಾಂಕಿನಿಂದ ಹಣ ಸಾಗಿಸುತ್ತಿದ್ದ ಸಿಬ್ಬಂದಿ ಮೇಲೆ ದರೋಡೆಕೋರರು ಗುಂಡಿನ ದಾಳಿ ನಡೆಸಿದ್ದರು. ₹83 ಲಕ್ಷ ನಗದು ದೋಚಿ ಪರಾರಿಯಾಗಿದ್ದರು. ಘಟನೆಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಆರೋಪಿಗಳ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನವನ್ನೂ ಘೋಷಿಸಲಾಗಿತ್ತು. ಆದರೂ ಈ ಪ್ರಕರಣದ ಆರೋಪಿಗಳ ಬಂಧನ ಇನ್ನೂ ಸಾಧ್ಯವಾಗಿಲ್ಲ.

‘ಆರೋಪಿಗಳ ಪತ್ತೆ ವಿಳಂಬವಾಗುತ್ತಿದೆ. ಇದರಿಂದ ಕಳವು ಪ್ರಕರಣಗಳು ಹೆಚ್ಚುತ್ತಿವೆ. ಪತ್ತೆ ಕಾರ್ಯಕ್ಕೆ ವೇಗ ನೀಡಬೇಕು’ ಎಂದು ಜನರು ಆಗ್ರಹಿಸುತ್ತಾರೆ.

ಶಾಸಕಿ ಕಚೇರಿಯನ್ನೂ ಬಿಡದ ಕಳ್ಳರು!

ಈಚೆಗೆ ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಕಳ್ಳರು ಶಾಸಕಿ ಲತಾ ಮಲ್ಲಿಕಾರ್ಜುನ ಅವರ ಕಚೇರಿಯಿಂದ ಆಭರಣ ಕಳವು ಮಾಡಿ ಪರಾರಿಯಾಗಿದ್ದರು. ಬಳಿಕ ಪೊಲೀಸರು ಮಧ್ಯಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಿದ್ದರು. ಅವರಿಂದ ₹11.65 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದರು.

ಗಸ್ತು ಹೆಚ್ಚಳ: ಶರಣಪ್ಪ

‘ಕಲಬುರಗಿ ನಗರದಲ್ಲಿ ಹೆಚ್ಚು ಕಳವು ಪ್ರಕರಣಗಳು ನಡೆಯುವ ಪ್ರದೇಶಗಳನ್ನು ಗುರುತಿಸಿ ಅಲ್ಲಿ ಗಸ್ತು ಹೆಚ್ಚಳ ಮಾಡಲಾಗುತ್ತಿದೆ’ ಎಂದು ಕಲಬುರಗಿ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ ತಿಳಿಸಿದರು. ಪದೇ ಪದೇ ಕಳವು ಪ್ರಕರಣಗಳಲ್ಲಿ ಭಾಗಿಯಾಗುವ ಆರೋಪಿಗಳನ್ನು ನಿಯಮಿತವಾಗಿ ಠಾಣೆಗೆ ಕರೆಯಿಸಿ ವಿಚಾರಣೆ ಮಾಡಲಾಗುತ್ತದೆ. ಕಳವು ಪ್ರಕರಣಗಳ ತಡೆಗೆ ಪ್ರಯತ್ನಿಸಲಾಗುತ್ತಿದೆ. 15 ದಿನಗಳ ಅವಧಿಯಲ್ಲಿ 15 ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ ಸುಮಾರು ₹25 ಲಕ್ಷ ಮೌಲ್ಯದಷ್ಟು ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಸಾರ್ವಜನಿಕರೂ ಜಾಗ್ರತೆ ವಹಿಸಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.