ಚಿತ್ತಾಪುರ: ಸ್ಥಳೀಯ ಪೊಲೀಸ್ ಠಾಣೆ ವ್ಯಾಪ್ತಿಯ ತಾಲ್ಲೂಕಿನ ಕಮರವಾಡಿ ಗ್ರಾಮದ ಮನೆಯೊಂದರ ಬೀಗ ಮುರಿದು 55 ಗ್ರಾಂ ಚಿನ್ನಾಭರಣ, 155 ಗ್ರಾಂ ಬೆಳ್ಳಿ, ₹55 ಸಾವಿರ ನಗದು ಸೇರಿದಂತೆ ಒಟ್ಟು ₹4.05 ಲಕ್ಷ ಮೌಲ್ಯದ ವಸ್ತುಗಳು ಕಳುವು ಮಾಡಿರುವ ಪ್ರಕರಣ ಬುಧವಾರ ಬೆಳಕಿಗೆ ಬಂದಿದೆ.

ಪ್ರಕರಣದ ವಿವರ: ಭಾನುವಾರ (ಮಾ.1) ರಾತ್ರಿ 8 ಗಂಟೆಗೆ ಕುಟುಂಬದ ಸದಸ್ಯರ ಆರೋಗ್ಯ ಸರಿಯಿಲ್ಲ ಎಂದು ಚಿಕಿತ್ಸೆಗಾಗಿ ಗ್ರಾಮದ ಮಲ್ಲಿಕಾರ್ಜುನ ಮಹಾದೇವಪ್ಪ ಮಾಲೀಪಾಟೀಲ ಅವರು ಮನೆಗೆ ಬೀಗ ಹಾಕಿ ವಾಡಿ ಪಟ್ಟಣಕ್ಕೆ ಹೋಗಿದ್ದಾಗ ಮನೆಯ ಬೀಗ ಮುರಿದು ಮನೆಯ ಲಾಕರ್ನಲ್ಲಿದ್ದ ಬಂಗಾರ, ಬೆಳ್ಳಿ, ನಗದು ದೋಚಲಾಗಿದೆ.

ಮಲ್ಲಿಕಾರ್ಜುನ ಮಹಾದೇವಪ್ಪ ಮಾಲಿಪಾಟೀಲ ಅವರು ನೀಡಿರುವ ದೂರಿನ ಅನ್ವಯ ಮಾ.3 ರಂದು ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಅಧಿಕಾರಿಗಳು ಗ್ರಾಮಕ್ಕೆ ತೆರಳಿ ಮನೆಯಲ್ಲಿ ಪರಿಶೀಲಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಪೊಲೀಸರು ಗ್ರಾಮದ ಕೆಲವರನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.