ಗುರುವಾರ , ನವೆಂಬರ್ 14, 2019
19 °C

ಜನವರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಕಾರಜೋಳ

Published:
Updated:

ಕಲಬುರ್ಗಿ: ಡಿಸೆಂಬರ್ ನಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆ ಇರುವುದರಿಂದ ಜನವರಿಯಲ್ಲಿ ಕಲಬುರ್ಗಿಯಲ್ಲಿ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಚಿಂತನೆ ಇದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ.ಕಾರಜೋಳ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚುನಾವಣೆಗಳು ಬಂದರೆ ಅಧಿಕಾರಿಗಳು ಆ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುತ್ತಾರೆ. ಚುನಾವಣೆ ‌ಬಳಿಕ‌ ನಡೆದರೆ ಅತ್ಯಂತ ವ್ಯವಸ್ಥಿತವಾಗಿ ಅದ್ಧೂರಿಯಾಗಿ ‌ನಡೆಸಬಹುದು ಎಂದು ಹೇಳಿದರು. ಇತ್ತೀಚೆಗೆ ನನ್ನನ್ನು ಭೇಟಿ ಮಾಡಿದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮನು ಬಳಿಗಾರ ಅವರಿಗೂ ತಿಳಿಸಿದ್ದೇನೆ ಎಂದು ಹೇಳಿದರು.

₹ 1200 ಕೋಟಿಯನ್ನು ನೆರೆಗಾಗಿ ಮಧ್ಯಂತರ ಪರಿಹಾರ ನೀಡಲಾಗಿದೆ. ಇನ್ನಷ್ಟು ಪರಿಹಾರ ಕೇಂದ್ರದಿಂದ ಬರಲಿದೆ ಎಂದರು.

ಪ್ರತಿಕ್ರಿಯಿಸಿ (+)