ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಕೇದಾರಲಿಂಗಯ್ಯ

Last Updated 5 ಏಪ್ರಿಲ್ 2023, 7:51 IST
ಅಕ್ಷರ ಗಾತ್ರ

ಕಲಬುರಗಿ: ಜೇವರ್ಗಿ ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕು ಬಾರಿ ಚುನಾವಣೆಗೆ ಸ್ಪರ್ಧಿಸಿ ನಾಲ್ಕು ಬಾರಿಯೂ ಮತಗಳಿಕೆಯಲ್ಲಿ ಮೂರನೇ ಸ್ಥಾನ ಪಡೆದಿದ್ದ ಕೇದಾರಲಿಂಗಯ್ಯ ಹಿರೇಮಠ ಅವರು ಜೆಡಿಎಸ್‌ ತೊರೆದು ಬುಧವಾರ ಕಾಂಗ್ರೆಸ್ ಸೇರ್ಪಡೆಯಾದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರು ಕೇದಾರಲಿಂಗಯ್ಯ ಅವರಿಗೆ ಪಕ್ಷದ ಧ್ವಜ ನೀಡಿ ಬರ ಮಾಡಿಕೊಂಡರು.

ಕೇದಾರಲಿಂಗಯ್ಯ ಅವರು ಜೇವರ್ಗಿ ಕ್ಷೇತ್ರದಲ್ಲಿ ಐದನೇ ಬಾರಿಗೆ ಕಣಕ್ಕಿಳಿಯಲು ಸಿದ್ಧತೆ ಮಾಡಿಕೊಂಡಿದ್ದರು.ಆದರೆ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ಪ್ರಕಟಿಸಿದ್ದ ಪಕ್ಷದ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೇದಾರಲಿಂಗಯ್ಯ ಅವರ ಹೆಸರು ಇರಲಿಲ್ಲ. ಹೀಗಾಗಿ, ಅಂದಿನಿಂದ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಈಗ ಅಧಿಕೃತವಾಗಿ ಕಾಂಗ್ರೆಸ್ ಸೇರಿದರು.

ಕೇದಾರಲಿಂಗಯ್ಯ ಅವರು ಕಳೆದ ನಾಲ್ಕು ದಶಕಗಳಿಂದ ಜನತಾ ಪರಿವಾರ ಹಾಗೂ ಜೆಡಿಎಸ್‌ನೊಂದಿಗೆ ಗುರುತಿಸಿಕೊಂಡಿದ್ದರು. ಮೂರು ಬಾರಿ ಜೆಡಿಎಸ್ ಹಾಗೂ ಒಮ್ಮೆ ಪಕ್ಷೇತರರಾಗಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 1999ರಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿ 7,715 ಮತಗಳಿಂದ 3ನೇ ಸ್ಥಾನ ಪಡೆದಿದ್ದರು. 2008ರಲ್ಲಿ ಜೆಡಿಎಸ್‌ನಿಂದ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು 7,856 ಮತಪಡೆದರು. 2013 ಮತ್ತು 2018ರಲ್ಲಿ ಜೆಡಿಎಸ್‌ ಸ್ಪರ್ಧಿಸಿ ಕ್ರಮವಾಗಿ 24,920 ಮತ್ತು 35,691 ಮತ ಗಳಿಸಿದ್ದರು.

ವರ್ಷ; ಪಕ್ಷ; ಪಡೆದ ಮತಗಳು; ಸ್ಥಾನ
1999; ಜೆಡಿಎಸ್‌ 7,715; 3ನೇ ಸ್ಥಾನ
2008; ಪಕ್ಷೇತರ 7,856; 3ನೇ ಸ್ಥಾನ
2013; ಜೆಡಿಎಸ್; 24,920; 3ನೇ ಸ್ಥಾನ
2018; ಜೆಡಿಎಸ್; 35,691; 3ನೇ ಸ್ಥಾನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT