ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂಚೋಳಿ: ಮಾಜಿ ಮುಖ್ಯಮಂತ್ರಿ ದಿವಂಗತ ವೀರೇಂದ್ರ ಪಾಟೀಲ‌ರ ಪತ್ನಿ ಶಾರದಾ ನಿಧನ

Published 26 ಸೆಪ್ಟೆಂಬರ್ 2023, 5:45 IST
Last Updated 26 ಸೆಪ್ಟೆಂಬರ್ 2023, 5:45 IST
ಅಕ್ಷರ ಗಾತ್ರ

ಚಿಂಚೋಳಿ (ಕಲಬುರಗಿ‌ ಜಿಲ್ಲೆ): ಮಾಜಿ ಮುಖ್ಯಮಂತ್ರಿ ದಿವಂಗತ ವೀರೇಂದ್ರ ಪಾಟೀಲ ಅವರ ಪತ್ನಿ ಶಾರದಾ ವಿ.ಪಾಟೀಲ(93) ಅವರು ಮಂಗಳವಾರ ಬೆಂಗಳೂರಿನಲ್ಲಿ ನಿಧನರಾದರು.

ಅವರಿಗೆ ಪುತ್ರ ಮಾಜಿ ಶಾಸಕ ಕೈಲಾಸ ವೀರೇಂದ್ರ ಪಾಟೀಲ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ವೀರೇಂದ್ರ ಪಾಟೀಲರು 1997ರ ಮಾರ್ಚ್ 14ರಂದು ನಿಧನರಾಗಿದ್ದರು. ಮಾಜಿ ಸಂಸದ(ಅಳಿಯ) ಡಾ. ಬಿ.ಜಿ ಜವಳಿ ಸೇರಿದಂತೆ ಅಪಾರ ಬಂಧು ಬಳಗ ಹೊಂದಿದ್ದಾರೆ.

ಅಂತ್ಯಕ್ರಿಯೆ ಚಿಂಚೋಳಿಯ ವೀರೇಂದ್ರ ಪಾಟೀಲ ಸಮಾಧಿ ಪಕ್ಕದಲ್ಲಿ ಬುಧವಾರ ಮಧ್ಯಾಹ್ನ 2ಕ್ಕೆ ನಡೆಸಲಾಗುವುದು. ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಬುಧವಾರ ಬೆಳಿಗ್ಗೆ ವೀರೇಂದ್ರ ಪಾಟೀಲ ಪಿಯು ವಿಜ್ಞಾನ ಮಹಾವಿದ್ಯಾಲಯದ ಆವರಣದಲ್ಲಿ ಇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT