ಕಲಬುರಗಿ: ಮುಂಗಾರು ಮಳೆಯಿಂದ ರಾಜ್ಯದಲ್ಲಿ ಈತನಕ ಒಟ್ಟು 9.60 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದೆ. ಅದರಲ್ಲಿ ಶೇ95ರಷ್ಟು ಬೆಳೆಹಾನಿ ಉತ್ತರ ಕರ್ನಾಟಕದ ಎಂಟು ಜಿಲ್ಲೆಗಳಲ್ಲೇ ಸಂಭವಿಸಿದೆ!

ಕಲಬುರಗಿ, ವಿಜಯಪುರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅತಿವೃಷ್ಟಿ ಹಾಗೂ ನದಿಗಳ ಪ್ರವಾಹದಿಂದ ಉಂಟಾದ ಹಾನಿ ಅರಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಭಾಗದ ಸಚಿವರೊಂದಿಗೆ ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿದರು. ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.

‘ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಈ ಸಲ ವ್ಯಾಪಕ ಮಳೆಯಾಗಿದೆ. ವಿಜಯಪುರದಲ್ಲಿ ವಾಡಿಕೆಗಿಂತಲೂ ಶೇ 58ರಷ್ಟು, ಬಾಗಲಕೋಟೆಯಲ್ಲಿ ಶೇ 37ರಷ್ಟು, ಕಲಬುರಗಿಯಲ್ಲಿ ಶೇ 34ರಷ್ಟು, ಯಾದಗಿರಿಯಲ್ಲಿ ಶೇ 29ರಷ್ಟು, ಬೆಳಗಾವಿಯಲ್ಲಿ ಶೇ 26ರಷ್ಟು, ರಾಯಚೂರಿನಲ್ಲಿ ಶೇ 21ರಷ್ಟು, ಗದುಗಿನಲ್ಲಿ ಶೇ 17ರಷ್ಟು ಹಾಗೂ ಬೀದರ್ನಲ್ಲಿ ಶೇ 16ರಷ್ಟು ಹೆಚ್ಚುವರಿ ಮಳೆಯಾಗಿದೆ’ ಎಂದು ಮುಖ್ಯಮಂತ್ರಿ ಹೇಳಿದರು.

‘ರಾಜ್ಯದಲ್ಲಿ ಬೆಳೆ ಹಾನಿ ಬಗೆಗೆ ಈತನಕ ಐದು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರವೇ ಜಂಟಿ ಸಮೀಕ್ಷೆ ನಡೆಸಲು ಸಾಧ್ಯವಾಗಿದೆ. ಇನ್ನೂ ಸಾಕಷ್ಟು ಬೆಳೆಗಳು ಹಾನಿಯಾಗಿದ್ದು, ರೈತರ ಭೂಮಿಗೆ ಹೋಗಿ ಸಮೀಕ್ಷೆ ಮಾಡದಷ್ಟು ತೇವಾಂಶ ಹೊಲಗಳಲ್ಲಿದೆ’ ಎಂದರು.

‘ಪ್ರಾಥಮಿಕ ವರದಿ ಪ್ರಕಾರ ರಾಜ್ಯದಲ್ಲಿ ಈತನಕ ಒಟ್ಟಾರೆ 9,60,578 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಅದರಲ್ಲಿ ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ ಜಿಲ್ಲೆಗಳ ವ್ಯಾಪ್ತಿಯಲ್ಲಿ 9,03,966 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಒಟ್ಟಾರೆ ಹಾನಿಗೆ ಹೋಲಿಸಿದರೆ, ಶೇ 95ರಷ್ಟು ಹಾನಿ ಉತ್ತರ ಕರ್ನಾಟಕದ ಎಂಟು ಜಿಲ್ಲೆಗಳಲ್ಲೇ ಸಂಭವಿಸಿದೆ’ ಎಂದು ವಿವರಿಸಿದರು.

‘ಒಟ್ಟು 9.60 ಲಕ್ಷ ಹೆಕ್ಟೇರ್ ಬೆಳೆಹಾನಿ ಪೈಕಿ 8,88,953 ಹೆಕ್ಟೇರ್ ಪ್ರದೇಶದ ಕೃಷಿ ಬೆಳೆಗಳು ಹಾಗೂ 71,624 ಹೆಕ್ಟೇರ್ಗಳಷ್ಟು ತೋಟಗಾರಿಕಾ ಬೆಳೆಗಳು ಹಾನಿಯಾಗಿರುವ ಅಂದಾಜಿದೆ’ ಎಂದು ಸಿದ್ದರಾಮಯ್ಯ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವಿಜಯಪುರ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಬೀದರ್ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಯಾದಗಿರಿ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ, ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ರಹೀಂಖಾನ್, ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯ್ಸಿಂಗ್, ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಇಂಧನ ಇಲಾಖೆಯ ಹೆಚ್ಚುವರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಂಕಜ್ ಕುಮಾರ ಪಾಂಡೆ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಇದ್ದರು.

ಹೊಲಗಳು ಕೆರೆಗಳಂತಾಗಿವೆ. ಬೆಳೆಗಳು ಕೊಚ್ಚಿ ಹೋಗಿವೆ. ಬೆಳೆಗಳು ನೀರಲ್ಲೇ ನಿಂತು ಕೊಳೆಯುತ್ತಿರುವುದು ವೈಮಾನಿಕ ಸಮೀಕ್ಷೆಯಲ್ಲಿ ಕಂಡಿದೆ
ಸಿದ್ದರಾಮಯ್ಯ ಮುಖ್ಯಮಂತ್ರಿ

ಸಚಿವರು, ಶಾಸಕರು, ಅಧಿಕಾರಿಗಳ ಸಭೆ

ವೈಮಾನಿಕ ಸಮೀಕ್ಷೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ ಜಿಲ್ಲೆಗಳ ಶಾಸಕರು, ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

‘ಮಹಾರಾಷ್ಟ್ರದಿಂದ ಬರುತ್ತಿರುವ ನೀರಿನಿಂದ ಪ್ರವಾಹ ಉಂಟಾಗುವ ಸ್ಥಳಗಳಲ್ಲಿ ಅಗತ್ಯ ಇರುವ ಕಡೆ ತಾತ್ಕಾಲಿಕ, ಶಾಶ್ವತ ತಡೆಗೋಡೆ ಕಟ್ಟಿಸಿ ಅನಾಹುತದ ಪ್ರಮಾಣ ತಪ್ಪಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಪರಿಹಾರ ಕಾರ್ಯಕ್ಕೆ ಹಣಕ್ಕೆ ಕೊರತೆ ಇಲ್ಲ. ಪಿಡಿ ಖಾತೆಯಲ್ಲಿ ಹಣವಿದ್ದು, ತುರ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ನಿರಂತರವಾಗಿ ನಡೆಸಬೇಕು. ಪದೇ ಪದೇ ಪ್ರವಾಹಕ್ಕೆ ತುತ್ತಾಗುವ ಪುನರ್ವಸತಿ ಕಲ್ಪಿಸಲು ಸಾಧ್ಯವಾಗದ ಗ್ರಾಮಗಳ ಸ್ಥಳಾಂತರದ ಬಗ್ಗೆ ಹಿಂದಿನ ಎಲ್ಲಾ ಇಲಾಖೆ ಅನುಭವಗಳನ್ನು ಪರಿಗಣಿಸಿ ಸೂಕ್ತ ಯೋಜನೆ ರೂಪಿಸಬೇಕು’ ಎಂದು ಮುಖ್ಯಮಂತ್ರಿ ಸೂಚಿಸಿದರು.

ಪ್ರವಾಹದಿಂದ ಕೃಷಿ ಭೂಮಿಯ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿರುತ್ತದೆ. ಇದರಿಂದ ಪರಿಹಾರ ಕೊಟ್ಟರೂ ಬೆಳೆ ಬೆಳೆಯುವುದು ಕಷ್ಟ. ಹೀಗಾಗಿ ಕೆರೆಗಳಲ್ಲಿರುವ ಫಲವತ್ತಾದ ಹೂಳನ್ನು ತೆಗೆದು ಫಲವತ್ತತೆ ಕಳೆದುಕೊಂಡ ಕೃಷಿ ಭೂಮಿಗೆ ಹಾಕಲು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡುವ ಬಗ್ಗೆ ಚರ್ಚಿಸಲಾಯಿತು.

‘ಬೆಳೆ ಹಾನಿ ಜಂಟಿ ಸಮೀಕ್ಷೆ ಅತ್ಯಂತ ಸಮರ್ಪಕ ಮತ್ತು ವೈಜ್ಞಾನಿಕವಾಗಿರುವಂತೆ ಎಚ್ಚರ ವಹಿಸಬೇಕು. ಹಾನಿಯಾದ ಬೆಳೆಗಳಿಗೆ ಕೃಷಿ ವಿಮೆ ಸಮರ್ಪಕವಾಗಿ ಒದಗಿಸುವಂತೆ ವಿಮಾ ಕಂಪನಿಗಳಿಗೆ ಸೂಚಿಸಬೇಕು. ಜಿಲ್ಲಾಧಿಕಾರಿಗಳು ಬ್ಯಾಂಕರ್ಗಳ ಜೊತೆಗೆ ಚರ್ಚಿಸಬೇಕು. ಸಂತ್ರಸ್ತ ರೈತರ ನೆರವಿಗೆ ಧಾವಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಗ್ರಾಮೀಣ ನೀರು ಸರಬರಾಜು ವ್ಯವಸ್ಥೆ ಪರೀಕ್ಷಿಸಬೇಕು. ಅಂತರ್ಜಲ ಕಲುಷಿತಗೊಳ್ಳುವ ಅಪಾಯವಿದ್ದು, ಸಾಂಕ್ರಾಮಿಕ ರೋಗಗಳು ಹೆಚ್ಚುವ ಸಾಧ್ಯತೆಗಳಿವೆ. ಆರೋಗ್ಯ ರಕ್ಷಣೆಗೆ ಗಮನ ಹರಿಸಬೇಕು. ಶಾಲಾ ಮಕ್ಕಳ ಹಾಸ್ಟೆಲ್ಗಳಲ್ಲಿ ಆರೋಗ್ಯ ತಪಾಸಣೆ ಕಡ್ಡಾಯವಾಗಿ ನಡೆಸಬೇಕು’ ಎಂದರು.

‘ಮಳೆಯಲ್ಲಿ ದಾಖಲೆಗಳು, ಗುರುತಿನ ಚೀಟಿ ಕೊಚ್ಚಿ ಹೋಗಿರುವ, ಹಾಳಾಗಿರುವುದು ವರದಿಯಾಗಿದೆ. ಆ ಜನರು ಆತಂಕ ಪಡುವ ಅಗತ್ಯ ಇಲ್ಲದಂತೆ ಅಭಿಯಾನದ ರೂಪದಲ್ಲಿ ಹೊಸ ಗುರುತಿನ ಚೀಟಿ, ದಾಖಲೆಗಳು ಒದಗಿಸಬೇಕು’ ಎಂದು ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.