ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Last Updated 23 ಫೆಬ್ರುವರಿ 2022, 2:24 IST
ಅಕ್ಷರ ಗಾತ್ರ

ಶಹಾಬಾದ್: ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುವೆವು ಎಂದು ಹೇಳಿಕೆ ನೀಡಿದ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಸೋಮವಾರ ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಲಾದ ಪ್ರತಿಭಟನೆಯಲ್ಲಿ ಮೊದಲಿಗೆ ನೂರಾರು ಸಂಖ್ಯೆ ಕಾಂಗ್ರೆಸ್ ಮುಖಂಡರು ಹಾಗು ಕಾರ್ಯಕರ್ತರು ಅಂಬೇಡ್ಕರ್ ವೃತ್ತದಿಂದ ಪ್ರಮುಖ ಬೀದಿಗಳ ಮೂಲಕ ನೆಹರು ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಸಚಿವ ಈಶ್ವರಪ್ಪ ಹಾಗು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್,ನಗರಸಭೆಯ ಅಧ್ಯಕ್ಷೆ ಅಂಜಲಿ ಕಂಬಾನೂರ, ಚಂದು ಜಾಧವ, ಮುಖಂಡ ಸುರೇಶ ಮೆಂಗನ, ಕುಮಾರ ಚವ್ಹಾಣ ಮಾತನಾಡಿ, ಕೇವಲ ಭಾವನಾತ್ಮಕ ವಿಷಯಗಳ ಕುರಿತು ವಿವಾದಾತ್ಮಕ ಹೇಳಿಕೆಯನ್ನು ನೀಡುವ ಮೂಲಕ ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಕೆಲಸ ಮಾಡುತ್ತಿದ್ದಾರೆ.ಈ ಹಿಂದೆಯೂ ಸಮಾಜಘಾತುಕ ಹೇಳಿಕೆಗಳನ್ನು ನೀಡುವ ಮೂಲಕ ಅಶಾಂತಿ ಉಂಟು ಮಾಡಿದ್ದಾರೆ. ಈಗ ತಾವೊಬ್ಬ ಸಂವಿಧಾನಾತ್ಮಕ ಹುದ್ದೆಯಲ್ಲಿದ್ದು ಕೆಂಪುಕೋಟೆಯ ಕೇಸರಿ ಧ್ವಜವನ್ನು ಹಾರಿಸುವುದಾಗಿ ಹೇಳಿಕೆ ನೀಡುವ ಮೂಲಕ ದೇಶದ್ರೋಹದ ಮಾತುಗ ಳನ್ನಾಡಿದ್ದಾರೆ ಎಂದು ಟೀಕಿಸಿದರು.

ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿಜಯಕುಮಾರ ಮುಟ್ಟತ್ತಿ, ಪ್ರಧಾನ ಕಾರ್ಯದರ್ಶಿ ಮೃತ್ಯುಂಜಯ್ ಹಿರೇಮಠ, ಯಾಕೂಬ ಮರ್ಚಂಟ, ಸುಭಾಷ ಪಂಚಾಳ, ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ,ಉಪಾಧ್ಯಕ್ಷೆ ಸಲೀಮಾಬೇಗಂ, ಹಾಷಮ ಖಾನ, ಗಿರೀಶ ಕಂಬಾನೂರ, ಕುಮಾರ ಚವ್ಹಾಣ, ಶರಣಗೌಡ ಪಾಟೀಲ (, ವಿಶ್ವರಾಧ್ಯ ಬಿರಾಳ, ನಾಗಣ್ಣ ರಾಂಪೂರೆ, ಕಿರಣ ಚವ್ಹಾಣ, ಕಿರಣಬಾಬು ಕೋರೆ, ಸುರೇಶ ಮೆಂಗನ, ಭರತ್ ಧನ್ನಾ, ಮುಜಾಹಿದ್ ಹುಸೇನ್, ಜಾಕೀರ, ಸೂರ್ಯಕಾಂತ ಕೋಬಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT