ಕಲಬುರ್ಗಿ: ‘ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್ ಬಗ್ಗೆ ಟೀಕಿಸಿರುವುದನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅವರು ಇತ್ತೀಚೆಗೆ ಸಾಕಷ್ಟು ಅಧ್ಯಯನ ಮಾಡುತ್ತಿದ್ದಾರೆ. ಬಹುಶಃ ತಮ್ಮ ವಿದ್ಯಾರ್ಥಿ ದಿನಗಳಲ್ಲೂ ಇಷ್ಟೊಂದು ಓದಿರಲಿಕ್ಕಿಲ್ಲ’ ಎಂದುವಸತಿ ಸಚಿವ ವಿ. ಸೋಮಣ್ಣ ವ್ಯಂಗ್ಯವಾಡಿದರು.

ಇಲ್ಲಿನ ವಿಮಾನ ನಿಲ್ದಾಣದಿಂದ ಸಿಂದಗಿಗೆ ತೆರಳುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಮಾನದಲ್ಲಿ ಬರುವಾಗಲೂ ಅವರೊಂದಿಗೆ ಮಾತನಾಡಿದೆ. ನಾನು ಚಿಕ್ಕ ವಯಸ್ಸಿನಲ್ಲಿಯೇ ಆರ್‌ಎಸ್‌ಎಸ್‌ನೊಂದಿಗೆ ನಂಟು ಹೊಂದಿದ್ದೆ. ಅದು ರಾಷ್ಟ್ರನಿರ್ಮಾಣ ಹಾಗೂ ವ್ಯಕ್ತಿತ್ವವನ್ನು ಬೆಳೆಸುವಲ್ಲಿ ನಿರತವಾಗಿದೆಯೇ ಹೊರತು ಕುಮಾರಸ್ವಾಮಿ ಅವರು ಹೇಳಿದಂತೆ ಜನರನ್ನು ಧರ್ಮದ ಆಧಾರದ ಮೇಲೆ ಒಡೆಯುತ್ತಿಲ್ಲ’ ಎಂದು ಹೇಳಿದರು.

ಸಿಂದಗಿ ಹಾಗೂ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ನಿಟ್ಟಿನಲ್ಲಿ ಪಕ್ಷದ ಮುಖಂಡರು, ಸಚಿವರು, ಶಾಸಕರು, ಕಾರ್ಯಕರ್ತರು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

‘ರಮೇಶ ಭೂಸನೂರ ಅವರು ಹಿಂದೆಯೂ ಶಾಸಕರಾಗಿ ಕೆಲಸ ಮಾಡಿದ್ದಾರೆ. ಹೀಗಾಗಿ, ಪಕ್ಷ ಅವರಿಗೆ ಟಿಕೆಟ್ ನೀಡಿದೆ. ಪಕ್ಷದ ನಾಯಕರೂ, ಮಾಜಿ ಮುಖ್ಯಮಂತ್ರಿಗಳೂ ಆದ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲರೂ ಒಟ್ಟಾಗಿ ಚುನಾವಣೆಯನ್ನು ಎದುರಿಸಲಿದ್ದೇವೆ’ ಎಂದರು.

ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಇದ್ದರು.

ಇದನ್ನೂ ಓದಿ... ತೈಲ ಬೆಲೆ ಬುಲೆಟ್ ರೈಲಿನಂತೆ ಮುನ್ನುಗ್ಗುತ್ತಿದೆ, ಇದೇನಾ ಅಚ್ಛೆ ದಿನ್: ಕಾಂಗ್ರೆಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.