ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಮ್ ಇದ್ದರೆ ಪ್ರಧಾನಿ ಮುಂದೆ ಕೂತು ಪರಿಹಾರ ತರಲಿ: ಸಿದ್ದರಾಮಯ್ಯ ಸವಾಲು

Last Updated 25 ಅಕ್ಟೋಬರ್ 2020, 9:06 IST
ಅಕ್ಷರ ಗಾತ್ರ
ADVERTISEMENT
""

ಕಲಬುರ್ಗಿ: ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣಗೆ ಹತ್ತು ಪಟ್ಟು ಧಮ್ ಇರಲಿ. ಅವರಿಗೆ ಧಮ್ ಇದ್ದರೆ ಪ್ರಧಾನಿ ನರೇಂದ್ರ ಮೋದಿ ಮುಂದೆ ಕೂತು ರಾಜ್ಯಕ್ಕೆ ಬರಬೇಕಾದ ಪರಿಹಾರ ತಗೆದುಕೊಂಡು ಬರಲಿ‌ ಎಂದು ‌ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು.

ಬೀದರ್, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳ ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಸ್ಥಳಕ್ಕೆ ವೀಕ್ಷಣೆಗಾಗಿ ಭಾನುವಾರ ಬಂದಿದ್ದ ವೇಳೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಅಶ್ವತ್ಥ ನಾರಾಯಣ ನನಗಿಂತ ಹೆಚ್ಚು ಧಮ್ ಇದೆ ಅಂತಾರೆ. ರಾಜ್ಯದಲ್ಲಿ 25 ಸಂಸದರು ಇದ್ದರೂ ಪ್ರಯೋಜನವಿಲ್ಲ. ಧಮ್ ಇದ್ದರೆ ಕೇಂದ್ರದಿಂದ ರಾಜ್ಯಕ್ಕೆ ಪರಿಹಾರ ತಗೆದುಕೊಂಡು ಬರಲಿ‌ ಎಂದು ತೀರುಗೇಟು ನೀಡಿದರು.

ನೆರೆ ಸಂತ್ರಸ್ತರಿಗೆ ಇನ್ನೂ ನಯಾ ಪೈಸೆ ಹಣ ನೀಡಿಲ್ಲ. ‌ಮುಖ್ಯಮಂತ್ರಿ ಯಡಿಯೂರಪ್ಪ ನಡೆಸಿದ ವೈಮಾನಿಕ ಸಮೀಕ್ಷೆಯಿಂದ ಯಾವುದೇ ಪ್ರಯೋಜನ ಇಲ್ಲ. ಅವರು ಜನರ ಜೊತೆ ಮಾತನಾಡಿಲ್ಲ. ನೆರೆ ಪೀಡಿತ ಪ್ರದೇಶಗಳಿಗೆ ಹೋಗಿಲ್ಲ ಎಂದು ವಾಗ್ದಾಳಿ ‌ನಡೆಸಿದರು.

ಬಿಜೆಪಿ ಸರ್ಕಾರ ಜನವಿರೋಧಿ ಸರ್ಕಾರ.‌ ಯಡಿಯೂರಪ್ಪ ಚೆಕ್ ಮೂಲಕ ಲಂಚ ಪಡೆಯುತ್ತಿದ್ದರು. ಇದೀಗ ಅವರ ಮಗ ಆರ್ ಟಿ ಜಿ ಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ. ಇಂತಹ ಭ್ರಷ್ಟ ಸರ್ಕಾರವನ್ನು ನಾನು ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದರು.

ಕಲಬುರ್ಗಿಯಿಂದ ಬೀದರ್‌ಗೆ ತೆರಳುವ ಮಾರ್ಗ ಮಧ್ಯೆ ಸಿದ್ದರಾಮಯ್ಯ ಅವರು ಅತಿವೃಷ್ಟಿಯಿಂದ ಹಾನಿಗೀಡಾದ ಹೊಲವನ್ನು ವೀಕ್ಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT