ಕಲಬುರಗಿ: ಶುಕ್ರವಾರ ನಸುಕಿನಿಂದ ನಗರದಲ್ಲಿ ಬಿಡುವು ನೀಡಿದ್ದ ಮಳೆ ಮತ್ತೆ ಬಿರುಸಿನಿಂದ ಸುರಿಯುತ್ತಿದೆ.
ಇದರಿಂದಾಗಿ ರಸ್ತೆ, ಚರಂಡಿಗಳು ತುಂಬಿ ಹರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಸೇಡಂ ತಾಲ್ಲೂಕಿನ ಮಳಖೇಡ ಬಳಿಯ ಸೇತುವೆ ಮಟ್ಟಕ್ಕೆ ಕಾಗಿಣಾ ನದಿ ಹರಿಯುತ್ತಿದೆ. ಯಾವುದೇ ಕ್ಷಣದಲ್ಲಿ ಸೇತುವೆ ಮುಳುಗುವ ಸಾಧ್ಯತೆ ಇದೆ.
ಮುಂದಿನ ಮೂರು ಗಂಟೆಗಳಲ್ಲಿ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.