ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಶಾನ್ಯ ಸಾರಿಗೆ ಇನ್ನು 'ಕಲ್ಯಾಣ ‌ಕರ್ನಾಟಕ ಸಾರಿಗೆ'

Last Updated 7 ಜುಲೈ 2021, 7:03 IST
ಅಕ್ಷರ ಗಾತ್ರ

ಕಲಬುರ್ಗಿ: ಕಲ್ಯಾಣ ‌ಕರ್ನಾಟಕದ ಏಳು ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯ ವ್ಯಾಪ್ತಿ ಹೊಂದಿರುವ ಈಶಾನ್ಯ ‌ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಸಾರಿಗೆ ಇಲಾಖೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ‌ಮಾಡಿದೆ.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಹೈದರಾಬಾದ್ ಕರ್ನಾಟಕ ಹೆಸರನ್ನು ಕಲ್ಯಾಣ ‌ಕರ್ನಾಟಕ ಎಂದು ಬದಲಾಯಿಸಿದ್ದರು. ಇದೀಗ ಸಾರಿಗೆ ಸಂಸ್ಥೆಯ ಹೆಸರೂ ಬದಲಾದಂತಾಗಿದೆ‌.

ಸಾರಿಗೆ ಖಾತೆಯನ್ನೂ ಹೊಂದಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಉಪಸ್ಥಿತಿಯಲ್ಲಿ ನಗರದಲ್ಲಿ ಬುಧವಾರ ‌ಸಂಸ್ಥೆಯ ಅಧ್ಯಕ್ಷ, ಸೇಡಂ ಶಾಸಕ ರಾಜಕುಮಾರ ‌ಪಾಟೀಲ ತೆಲ್ಕೂರ ಸಂಸ್ಥೆಯ ಹೆಸರು ಬದಲಾಯಿಸಿ ಹೊರಡಿಸಿದ ಸರ್ಕಾರದ ಆದೇಶ ಪ್ರತಿಯನ್ನು ಪ್ರದರ್ಶಿಸಿದರು.

ಕಲ್ಯಾಣ ‌ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ‌ಪಾಟೀಲ ರೇವೂರ, ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಕೂರ್ಮಾ ರಾವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT