‘ಶಹಾಬಾದ್ ಇಎಸ್‌ಐ ಕಟ್ಟಡದಲ್ಲಿ ತಾಲ್ಲೂಕು ಆಸ್ಪತ್ರೆ’
ಶಹಾಬಾದ್‌ನಲ್ಲಿರುವ ಕಾರ್ಮಿಕ ಇಲಾಖೆ ಅಧೀನದ ಇಎಸ್‌ಐ ಆಸ್ಪತ್ರೆಯ ಕಟ್ಟಡವನ್ನು ಆರೋಗ್ಯ ಇಲಾಖೆಯ ಸುಪರ್ದಿಗೆ ಪಡೆದು ತಾಲ್ಲೂಕು ಆಸ್ಪತ್ರೆ ಮಾಡುವ ಚಿಂತನೆ ಇದೆ. ಈ ಬಗ್ಗೆ ಕಾರ್ಮಿಕ ಇಲಾಖೆಯೊಂದಿಗೆ ಮಾತುಕತೆ ನಡೆದಿದೆ ಎಂದು ಡಾ.ಶರಣಪ್ರಕಾಶ್ ಪಾಟೀಲ ತಿಳಿಸಿದರು. ಪ‍್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸಚಿವರು ‘ಇಎಸ್‌ಐ ಆಸ್ಪತ್ರೆಯ ಕಟ್ಟಡವನ್ನು ಕೋವಿಡ್ ಸಂದರ್ಭದಲ್ಲಿ ನವೀಕರಿಸಲಾಗಿದೆ. ಹೊಸ ತಾಲ್ಲೂಕು ಕೇಂದ್ರವಾದ ಶಹಾಬಾದ್‌ಗೆ ತಾಲ್ಲೂಕು ಆಸ್ಪತ್ರೆ ನಿರ್ಮಿಸಲಾಗುತ್ತಿದ್ದು ಇದೇ ಕಟ್ಟಡವನ್ನು ಬಳಸಿಕೊಳ್ಳುವ ಚಿಂತನೆ ಇದೆ’ ಎಂದರು.