ಭಾನುವಾರ, ಜನವರಿ 26, 2020
31 °C

ಸಾಹಿತ್ಯ ಸಮ್ಮೇಳನದ ಮಾಹಿತಿಗೆ ಸಹಾಯವಾಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ನಗರದಲ್ಲಿ ಫೆ.5,6 ಮತ್ತು 7ರಂದು ನಡೆಯಲಿರುವ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಬಗ್ಗೆ ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಲಾಗಿದೆ.

ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯ ಅವಧಿಯಲ್ಲಿ 08472 277411 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರ ಸಿಂಪಿ ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಸಮ್ಮೇಳನದ ಪ್ರತಿನಿಧಿಗಳ ನೋಂದಣಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಇದೇ ಮೊದಲ ಬಾರಿಗೆ ಜಿಲ್ಲಾಧಿಕಾರಿ ಸೂಚನೆಯ ಮೇರೆಗೆ ಬಾರ್‌ಕೋಡ್‌ ಹೊಂದಿದ ರಶೀದಿ ಪುಸ್ತಕಗಳನ್ನು ನೀಡಲಾಗಿದೆ. ಈ ಹಿಂದೆ ಕಸಾಪ ತಾಲ್ಲೂಕು ಹಾಗೂ ಜಿಲ್ಲಾ ಘಟಕಗಳಿಗೆ ವಿತರಿಸಿದ್ದ ರಶೀದಿ ಪುಸ್ತಕಗಳನ್ನು ವಾಪಾಸ್‌ ಪಡೆದು, ಬಾರ್‌ಕೋಡ್‌ ಸಹಿತ ತಲಾ 100 ರಶೀದಿಗಳು ಇರುವ 183 ಪುಸ್ತಕಗಳನ್ನು ವಿತರಿಸಲಾಗಿದೆ’ ಎಂದರು.

ಸಮಯ ಕಡಿಮೆ ಇರುವುದರಿಂದ ಜ.15 ರೊಳಗೆ ನೋಂದಣಿಯ ಮಾಹಿತಿ ನೀಡುವಂತೆ ಘಟಕಗಳಿಗೆ ತಿಳಿಸಲಾಗಿದೆ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು