ಜೇವರ್ಗಿ: ತಾಲ್ಲೂಕಿನ ಕೆಲ್ಲೂರ ಗ್ರಾಮದಿಂದ ಆಂದೋಲಾ ಗ್ರಾಮಕ್ಕೆ ತೆರಳುವ ರಸ್ತೆ ತೀರಾ ಹದಗೆಟ್ಟಿದ್ದು, ಸಂಚರಿಸಲು ವಾಹನ ಸವಾರರು ಹರಸಾಹಸ ಪಡುವಂತಾಗಿದೆ.

ಕೆಲ್ಲೂರ ಗ್ರಾಮದಿಂದ ಜೈನಾಪುರ, ಆಂದೋಲಾ, ಮಲ್ಲಾ.ಕೆ, ಮಲ್ಲಾ.ಬಿ, ಬಿರಾಳ.ಕೆ, ಬಿರಾಳ.ಬಿ, ಹೊನ್ನಾಳ, ಹೋತಿನಮಡು, ರಾಂಪುರ, ಹೊಸೂರ, ಅಣಬಿ ಮೂಲಕ ಶಹಾಪುರ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು, ಅದರಲ್ಲೂ ಕೆಲ್ಲೂರದಿಂದ ಆಂದೋಲಾವರೆಗಿನ ರಸ್ತೆ ಗುಂಡಿಮಯವಾಗಿದೆ.

ಜೇವರ್ಗಿ ಪಟ್ಟಣಕ್ಕೆ ದಿನಾಲೂ ನೂರಾರು ಜನರು ವಿವಿಧ ಕೆಲಸ ಕಾರ್ಯಗಳಿಗೆ ಹಾಗೂ ಸಂತೆ ಮಾಡಲು ಬರುತ್ತಾರೆ. ರಸ್ತೆ ಅವ್ಯವಸ್ಥೆಯಿಂದಾಗಿ ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಕಾಲಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೊಂಡಮಯ ರಸ್ತೆಯಿಂದಾಗಿ ಸಂಚರಿಸುವ ಎಲ್ಲರೂ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಅಪಘಾತಗಳು ಸಾಮಾನ್ಯವಾಗಿವೆ.

ಈ ರಸ್ತೆಯಲ್ಲಿ ಕಾರು, ಆಟೊ, ಟಂಟಂ ಸೇರಿದಂತೆ ಸಣ್ಣ ವಾಹನಗಳನ್ನು ಚಲಾಯಿಸಲು ಹರಸಾಹಸ ಪಡಬೇಕು ಎನ್ನುತ್ತಾರೆ ಕಾರಿನ ಚಾಲಕರು. ಕೆಲ್ಲೂರದಿಂದ ಆಂದೋಲಾವರೆಗಿನ 6 ಕಿ.ಮೀ ರಸ್ತೆಯುದ್ದಕ್ಕೂ ಹೊಂಡಗಳು ಬಿದ್ದಿವೆ. 6 ಕಿ.ಮೀ ರಸ್ತೆ ಸಂಚಾರ ಮಾಡಲು ಗಂಟೆ ಸಮಯ ತಗಲುತ್ತಿದೆ. ನಿತ್ಯ ಈ ರಸ್ತೆ ಮೂಲಕ ನೂರಾರು ವಾಹನಗಳು ಸಂಚಾರ ಮಾಡುತ್ತಿದ್ದು, ಪ್ರಯಾಣದ ವೇಳೆ ಕೆಲ ದ್ವಿಚಕ್ರ ವಾಹನ ಸವಾರರು ಗುಂಡಿಗಳಲ್ಲಿ ಬಿದ್ದು ಕೈಕಾಲು ಮುರಿದುಕೊಂಡು ಆಸ್ಪತ್ರೆಗೆ ದಾಖಲಾದ ಘಟನೆಗಳು ಜರುಗಿವೆ.

ಸರ್ಕಾರ ರಸ್ತೆ ಅಭಿವೃದ್ಧಿಗಾಗಿ ಕೋಟ್ಯಂತರ ರೂಪಾಯಿ ಅನುದಾನ ಖರ್ಚು ಮಾಡುತ್ತಿದೆ. ಆದರೆ, ಸಮಪರ್ಕವಾಗಿ ಅನುಷ್ಠಾನವಾಗದ ಕಾರಣ ಗ್ರಾಮೀಣ ಭಾಗದ ಬಹುತೇಕ ರಸ್ತೆಗಳು ಅಧೋಗತಿಗೆ ತಲುಪಿವೆ. ಇಂತಹ ದುಸ್ಥಿತಿ ನೋಡಿದರೆ ಸರ್ಕಾರದಿಂದ ಬಿಡುಗಡೆಯಾದ ಹಣ ನಿಜಕ್ಕೂ ನಿರ್ದಿಷ್ಠ ಉದ್ದೇಶಕ್ಕೆ ಬಳಕೆಯಾಗುತ್ತಿಲ್ಲ ಎಂಬ ಸಣ್ಣ ಅನುಮಾನ ಕಾಡದೇ ಇರದು!

ರಸ್ತೆ ದುರಸ್ತಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಈಗಲಾದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಎಚ್ಚೆತ್ತುಕೊಂಡು ಹೊಸ ರಸ್ತೆ ನಿರ್ಮಿಸಬೇಕು ಎಂದು ಆಂದೋಲಾ, ಕೆಲ್ಲೂರ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತಾಲ್ಲೂಕಿನ ರಸ್ತೆಗಳ ಸ್ಥಿತಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ. ಈ ರಸ್ತೆ ದುರಸ್ತಿಗೆ ಅಧಿಕಾರಿಗಳು ಮುಂದಾಗಬೇಕು
ಸಿದ್ದು ಸಾಹು ಅಂಗಡಿ ಅಂದೋಲಾ, ಅಧ್ಯಕ್ಷ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜೇವರ್ಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.