ಕೆಂಭಾವಿ: ಅಧಿಕ ಜೇಷ್ಠ ಮಾಸದ ಅಂಗವಾಗಿ ಪಟ್ಟಣದ ಉತ್ತರಾದಿ ಮಠದಲ್ಲಿ ಕೂಡಲಿ ಆರ್ಯ ಅಕ್ಷೋಭ್ಯತೀರ್ಥ ಮಠಾಧೀಶರಾದ ರಘುವಿಜಯತೀರ್ಥರ ಉಪಸ್ಥಿತಿಯಲ್ಲಿ ಸೋಮವಾರದಿಂದ ಎಂಟು ದಿನಗಳ ಕಾಲ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಜಯಸತ್ಯಪ್ರಮೋದ ಸೇವಾ ಸಂಘದ ಅಧ್ಯಕ್ಷ ವಾಮನರಾವ ದೇಶಪಾಂಡೆ ತಿಳಿಸಿದರು.

ಭಾನುವಾರ ರಾತ್ರಿ ಬೆಳಗಾವಿ ನಗರದಿಂದ ಆಗಮಿಸುವ ಶ್ರೀಗಳನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗುವುದು. ರಘುವಿಜಯತೀರ್ಥ ಶ್ರೀಗಳ ಸಾನ್ನಿಧ್ಯದಲ್ಲಿ ಮಣ್ಣೂರಿನ ವೇದೇಶ ತೀರ್ಥ ವಿದ್ಯಾಪೀಠದ ಉಪ ಕುಲಪತಿ ಪಂ. ಸರ್ವೇಶಾಚಾರ್ಯ ಅಕಮಂಚಿ ಅವರು ಆರು ದಿನಗಳ ಕಾಲ ವಿಶೇಷ ಧಾರ್ಮಿಕ ಶಿಬಿರ ನಡೆಸಿಕೊಡಲಿದ್ದಾರೆ. ಈ ಶಿಬಿರದಲ್ಲಿ ಬೆಳಿಗ್ಗೆ ಮತ್ತು ಸಂಜೆ ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಪುರುಷರಿಗೆ ನಿತ್ಯ ನೈಮಿತ್ತಿಕ ಕರ್ಮಗಳು, ಸನಾತನ ಹಿಂದೂ ಧರ್ಮದ ರಕ್ಷಣೆ ಮತ್ತು ಜಾಗೃತಿ ಕುರಿತು ಶಿಬಿರ ನಡೆಯಲಿದೆ.

‘ಇದೇ ಸಂದರ್ಭದಲ್ಲಿ ಸತ್ಯನಾರಾಯಣ, ಸುಮಧ್ವ ಮಾರುತಿ ಮತ್ತು ಯತಿ ಚತುಷ್ಠಯ ವೃಂದಾವನಕ್ಕೆ ರಘುವಿಜಯತೀರ್ಥರಿಂದ ಪಂಚಾಮೃತ ಅಭಿಷೇಕ, ಹಲವು ಭಕ್ತರ ಮನೆಯಲ್ಲಿ ಶ್ರೀಗಳ ಪಾದಪೂಜೆ, ವೈಕುಂಠ ರಾಮಚಂದ್ರ ದೇವರ ಸಂಸ್ಥಾನ ಪೂಜೆ, ಸಂಜೆ ಪಂಡಿತರ ಉಪನ್ಯಾಸ, ಶ್ರೀಗಳ ಆಶಿರ್ವಚನ, ಪಲ್ಲಕ್ಕಿ ರಥೋತ್ಸವ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು ಮೇ 25 ರಂದು ದುಮ್ಮದ್ರಿ ವರಹಳ್ಳೇರಾಯನ ಕ್ಷೇತ್ರದಲ್ಲಿ ಶ್ರೀಗಳಿಂದ ವಿಶೇಷ ಪೂಜೆ ನೆರವೇರಲಿದೆ’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-30-1105068129

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.