ಕೆಂಭಾವಿ: ಸರ್ಕಾರ ತಂಬಾಕು ನಿಷೇಧ ಮಾಡುವುದು ಅಸಾಧ್ಯ. ನಾವು ಅದನ್ನು ಉಪಯೋಗಿಸದೆ ಇದ್ದಾಗ ಅದು ತಾನಾಗಿಯೇ ಬೆಲೆ ಕಳೆದುಕೊಳ್ಳುತ್ತದೆ. ದುಶ್ಚಟಗಳಿಂದ ದೂರವಿದ್ದು ವ್ಯಸನ ಮುಕ್ತರಾದರೆ ಆರೋಗ್ಯಯುತ ಸಮಾಜ ನಿರ್ಮಿಸಲು ಸಾಧ್ಯ’ ಎಂದು ಶಿಕ್ಷಕ ಗುರುರಾಜ ಕುಲಕರ್ಣಿ ಹೇಳಿದರು.

ಪಟ್ಟಣದ ಮಲ್ಲಯ್ಯನ ಗುಡಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ವಿರೋಧಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಧರ್ಮಸ್ಥಳ ಗ್ರಾಮಾಭಿವೃದ್ಧಿ ನಾಡಿನ ಸರ್ವಾಂಗೀಣ ವಿಕಾಸಕ್ಕೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ’ ಎಂದರು.

ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಡಿ.ಸಿ. ಪಾಟೀಲ ಮಾತನಾಡಿ, ‘ತಂಬಾಕು, ಸಿಗರೇಟ್ ಸೇವನೆಯಿಂದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ದುಶ್ಚಟಗಳಿಂದ ಮನುಷ್ಯ ಆರ್ಥಿಕವಾಗಿ, ದೈಹಿಕವಾಗಿ ಹಾಗೂ ಮಾನಸಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತಾನೆ. ದುಶ್ಚಟಗಳಿಂದ ದೂರವಾಗಲು ಸತ್ಸಂಗ, ಆಧ್ಯಾತ್ಮಿಕದ ಕಡೆಗೆ ಸ್ವಲ್ಪ ಒಲವು ಬೆಳೆಸಿಕೊಳ್ಳಬೇಕು’ ಎಂದರು.

ತಾಲ್ಲೂಕು ಯೋಜನಾಧಿಕಾರಿ ನಾಗೇಶ.ಎನ್.ಪಿ, ವಲಯ ಮೇಲ್ವಿಚಾರಕಿ ಮಹಾದೇವಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-30-421484518

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.