ಕೆಂಭಾವಿ: ‘ನಮ್ಮ ಸುತ್ತಮುತ್ತಲಿನ ಮಲಿನ ಪರಿಸರದಿಂದ ಬರುವ ಸಾಂಕ್ರಾಮಿಕ ರೋಗಗಳ ಬಗ್ಗೆ ಸದಾ ಜಾಗೃತೆ ವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು’ ಎಂದು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಗಿರೀಶ ಕುಲಕರ್ಣಿ ಹೇಳಿದರು.

ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶನಿವಾರ ನಡೆದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮನುಷ್ಯನಿಗೆ ಉತ್ತಮ ಆರೋಗ್ಯವೆ ದೊಡ್ಡ ಭಾಗ್ಯವಾಗಿದ್ದು ನಮ್ಮ ಮತ್ತು ಕುಟುಂಬದ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಇನ್ನು ಕೆಲವೆ ದಿನಗಳಲ್ಲಿ ಮಳೆಗಾಲ ಆರಂಭವಾಗಲಿದ್ದು ನಮ್ಮ ಮನೆಯಂಗಳ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಲಿನ ನೀರು ನಿಲ್ಲದಂತೆ ಸ್ವತಃ ನಾವೆ ಜಾಗೃತೆ ವಹಿಸುವುದು ಮುಖ್ಯವಾಗಿದೆ’ ಎಂದರು.

‘ನೀರಿನ ಟ್ಯಾಂಕ್, ಬ್ಯಾರಲ್ ಸೇರಿ ನೀರು ಸಂಗ್ರಹ ಮಾಡುವ ಪ್ರತಿಯೊಂದು ವಸ್ತುಗಳನ್ನು ನಿತ್ಯ ಸ್ವಚ್ಚಗೊಳಿಸಿ ನೀರು ಸಂಗ್ರಹಿಸಬೇಕು. ಮಳೆಗಾಲ ಪ್ರಾರಂಭವಾಗುವ ಮೊದಲು ಮತ್ತು ನಂತರದ ದಿನಗಳಲ್ಲಿ ಪಟ್ಟಣದ ವಿವಿಧೆಡೆಗಳಲ್ಲಿ ಕೀಟನಾಶಕ ಸಿಂಪರಣೆ ಮಾಡುವಂತೆ ಸ್ಥಳಿಯ ಪುರಸಭೆಗೆ ಪತ್ರ ಬರೆಯಲಾಗುವುದು’ ಎಂದರು.

‘ಮುಂಜಾಗೃತ ಕ್ರಮವಾಗಿ ರೋಗಿಗಳಿಗೆ ತೊಂದರೆಯಾಗದಂತೆ ಆರೋಗ್ಯ ಕೇಂದ್ರದಲ್ಲಿ ಎಲ್ಲ ವ್ಯವಸ್ಥೆ ಮಾಡಲಾಗುವುದು’ ಎಂದು ತಿಳಿಸಿದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರೇವಣಸಿದ್ದಪ್ಪ, ಶ್ರೀದೇವಿ, ಪ್ರೇಮಾ, ಸುಜಾತಾ, ಸುನಿತಾ ಸೇರಿದಂತೆ ಆಶಾ ಕಾರ್ಯಕರ್ತೆಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-30-233938115

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.