ಕೆಂಭಾವಿ: ಪಟ್ಟಣದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರು, ಸ್ವಚ್ಛತೆ, ಬೀದಿದೀಪ ಸೇರಿದಂತೆ ಹಲವು ಸಮಸ್ಯೆಗಳು ತಲೆದೊರಿದ್ದು ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಇತ್ತ ಗಮನ ಹರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಸರ್ಕಾರದಿಂದ ಪುರಸಭೆ ವ್ಯಾಪ್ತಿಯ ಅಭಿವೃದ್ಧಿಗೆ ಪ್ರತಿವರ್ಷ ಸಾಕಷ್ಟು ಅನುದಾನ ನೀಡುತ್ತಿದ್ದರೂ ಅದು ಅಭಿವೃದ್ಧಿಗೆ ಉಪಯೋಗವಾಗದೆ ಕೇವಲ ಕಾಗದಕ್ಕೆ ಸೀಮಿತವಾಗಿದೆ. ಕಳೆದ ಹದಿನೈದು ದಿನಗಳಿಂದ ವಾರ್ಡ್ ನಂ–5ರಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದ್ದು, ಜನತೆ ಪರದಾಡುವಂತಾಗಿದೆ.

ಪ್ರತಿ ಎರಡು ದಿನಕ್ಕೊಮ್ಮೆ ಕುಡಿಯುವ ನೀರು ಬರುತ್ತಿತ್ತು. ಆದರೆ, ನಿರ್ವಹಣೆಯ ಕೊರತೆಯಿಂದ ದಿನದಿಂದ ದಿನಕ್ಕೆ ಸಮಸ್ಯೆ ಹೆಚ್ಚಾಗುತ್ತಿದೆ. ಇದು ಕೇವಲ ಒಂದು ವಾರ್ಡ್ ಸಮಸ್ಯೆಯಲ್ಲ ಪಟ್ಟಣದ ಹಲವು ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ. ಪಟ್ಟಣದಲ್ಲಿ ನೀರಿನ ಲಭ್ಯತೆ ಸಾಕಷ್ಟಿದ್ದರೂ ಅದರ ಉಪಯೋಗ ಮಾತ್ರ ಆಗುತ್ತಿಲ್ಲ ಎಂಬ ಆರೋಪ ಕೇಳಿಬಂದಿವೆ.

ನೀರಿನ ಸಮಸ್ಯೆ ಕುರಿತು ಜನತೆ ಹಲವು ಬಾರಿ ಪುರಸಭೆಗೆ ಮೌಖಿಕವಾಗಿ ಮನವಿ ಮಾಡಿದ್ದರೂ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ. ಕೆಲವು ಭಾಗಗಳಲ್ಲಿ ನಲ್ಲಿಗಳು ಬಂದ್ ಆಗಿದ್ದು, ಇದಕ್ಕೆ ನೀರು ಪೂರೈಸುವ ಪೈಪ್ಲೈನ್ ಕಾರಣ ಎಂದು ಹೇಳಲಾಗುತ್ತಿದೆ. ಕಾಲುವೆಯಿಂದ ನೀರು ಸರಬರಾಜು ಮಾಡುವ ಪೈಪ್ ಬ್ಲಾಕ್ ಆಗಿರುವುದೇ ಇದಕ್ಕೆಲ್ಲ ಕಾರಣ ಎನ್ನಲ್ಲಾಗುತ್ತದೆ.

ಸ್ವಚ್ಛತೆ ಕಾಣದ ಚರಂಡಿಗಳಿಗಳು: ಹಲವು ಬಡಾವಣೆಗಳಲ್ಲಿನ ಒಳಚರಂಡಿಗಳು ತುಂಬಿ ದುರ್ನಾತ ಬೀರುತ್ತಿದ್ದು, ಇದನ್ನು ಸ್ವಚ್ಛಗೊಳಿಸಲು ಕಾರ್ಮಿಕರ ಕೊರತೆ ಇದೆ ಎಂಬ ಮಾತುಗಳು ಅಧಿಕಾರಿಗಳಿಂದ ಕೇಳಿ ಬರುತ್ತಿದೆ. ಪುರಸಭೆಯಲ್ಲಿದ್ದ ಜೆಸಿಬಿ ಯಂತ್ರ ಹಲವು ಸಮಸ್ಯೆಯಿಂದ ಪೊಲೀಸ್ ಠಾಣೆಯಲ್ಲಿ ಇದ್ದು ಸ್ವಚ್ಛತೆ ಎಂಬುದು ಇಲ್ಲಿ ಸಂಪೂರ್ಣ ಮಾಯವಾಗಿದೆ. ಒಟ್ಟಾರೆ ಪುರಸಭೆ ಹಲವು ಸಮಸ್ಯೆಗಳ ಆಗರವಾಗಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಈ ಬಗ್ಗೆ ವಿಶೇಷ ಗಮನ ಹರಿಸಿ ಪಟ್ಟಣದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂಬುದು ಜನರ ಬೇಡಿಕೆಯಾಗಿದೆ.

ಸಿಬ್ಬಂದಿ ಕೊರತೆ ಕಸ ವಿಲೇವಾರಿ ಬಂದ್: ಕಸ ವಿಲೇವಾರಿಗೆ ಪಟ್ಟಣದಲ್ಲಿ ನಾಲ್ಕು ವಾಹನಗಳಿದ್ದು, ಕಳೆದ ಒಂದು ವಾರದಿಂದ ಕಸ ವಿಲೇವಾರಿ ಮಾಡುವಲ್ಲಿ ವ್ಯತ್ಯಯ ಉಂಟಾಗಿದ್ದು, ಸಿಬ್ಬಂದಿ ಕೊರತೆ ಇರುವ ಬಗ್ಗೆ ಮಾತುಗಳು ಕೇಳಿಬರುತ್ತಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-30-1617450501

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.