ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ ಹಾವಳಿಗೆ ಕೇಂದ್ರದ ಸ್ಪಂದನೆ ಇಲ್ಲ: ಖರ್ಗೆ ಟೀಕೆ

Last Updated 15 ಆಗಸ್ಟ್ 2019, 13:48 IST
ಅಕ್ಷರ ಗಾತ್ರ

ಕಲಬುರ್ಗಿ: ‘ನೆರೆ ಹಾವಳಿಯಿಂದ ಜನ ತತ್ತರಿಸಿ ಹೋಗಿದ್ದು ಈವರೆಗೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ.ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರ, ಕರ್ನಾಟಕ, ಕೇರಳಕ್ಕೂ ಭೇಟಿ ನೀಡಿಲ್ಲ.ಗೃಹ ಸಚಿವ ಅಮಿತ್ ಶಾ ಬಂದು ಹೋಗಿದ್ದಾರೆಯೇ ಹೊರತು ಇನ್ನೂ ಹಣ ಬಿಡುಗಡೆ ಮಾಡಿಲ್ಲ. ಯಡಿಯೂರಪ್ಪ ನೇತೃತ್ವದ ಏಕವ್ಯಕ್ತಿ ಸರ್ಕಾರವೂ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಲು ವಿಫಲವಾಗಿದೆ’ ಎಂದು ಮಾಜಿ ಸಂಸದ ಎಂ.ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು.

ಇಲ್ಲಿನ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಗುರುವಾರ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,'ರಾಜ್ಯದಲ್ಲಿ ಉಂಟಾದ ನೆರೆ ಹಾವಳಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು.ಮುಖ್ಯಮಂತ್ರಿ ಒಬ್ಬರೇ ರಾಜ್ಯದೆಲ್ಲೆಡೆ ಓಡಾಡುವ ಸ್ಥಿತಿ ಬಂದಿದ್ದು, ಪುನರ್ವಸತಿ, ಬೆಳೆ ಹಾನಿಯಾದವರಿಗೆ ಪರಿಹಾರ ನೀಡುವ ಕೆಲಸ ತಕ್ಷಣ ಆಗಬೇಕು’ ಎಂದು ಒತ್ತಾಯಿಸಿದರು.

‘ಅಧಿಕಾರಿಗಳು ಚುರುಕಿನಿಂದ ಕೆಲಸ ಮಾಡಬೇಕು. ಅವರಿಗೆ ಮುಕ್ತವಾದ ಸ್ವಾತಂತ್ರ್ಯ ನೀಡಬೇಕು. ಯಾವ್ಯಾವ ಕೆಲಸಕ್ಕೆ ಹಣ ಬೇಕೊ ಅಷ್ಟನ್ನು ತಕ್ಷಣಕ್ಕೆ ಬಿಡುಗಡೆ ಮಾಡಬೇಕು.ಕೇಂದ್ರ ಸರ್ಕಾರವೂ ವಿಳಂಬ ಮಾಡದೇ ತಕ್ಷಣ ನೆರವು ಘೋಷಿಸಬೇಕು’ ಎಂದರು.

ಸಮಗ್ರ ತನಿಖೆಯಾಗಲಿ: ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಶಾಸಕರು ಹಾಗೂ ಪೊಲೀಸ್‌ ಅಧಿಕಾರಿಗಳ ಫೋನ್‌ ಕದ್ದಾಲಿಕೆ ಆಗಿರುವ ಆರೋಪಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು.ಯಾರು, ಏತಕ್ಕಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿದ್ದಾರೆ ಎಂಬುದು ರಾಜ್ಯದ ಜನತೆಗೆ ಗೊತ್ತಾಗಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT