ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರ್ಗೆ ಕುಟುಂಬದಿಂದ ಭೂಮಿ ದುರ್ಬಳಕೆ: ಮಣಿಕಂಠ ರಾಠೋಡ ಆರೋಪ

Last Updated 26 ಡಿಸೆಂಬರ್ 2022, 16:10 IST
ಅಕ್ಷರ ಗಾತ್ರ

ಕಲಬುರಗಿ: ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಳಿಯ ರಾಧಾಕೃಷ್ಣ ಹಾಗೂ ಖರ್ಗೆ ಅವರ ಪುತ್ರ ಪ್ರಿಯಾಂಕ್ ಅವರು ನಡೆಸುತ್ತಿರುವ ಕರ್ನಾಟಕ ಪೀಪಲ್ಸ್ ಎಜುಕೇಶನ್ ಸೊಸೈಟಿಯು ಜಿಲ್ಲಾಡಳಿತದಿಂದ ಕಲ್ಯಾಣ ಮಂಟಪ ನಿರ್ಮಿಸಲು ಉಚಿತವಾಗಿ ಭೂಮಿ ಪಡೆದು ಇದೀಗ ಸೊಸೈಟಿ ಕಚೇರಿ ನಡೆಸುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಆರಂಭಿಸಿದ್ದೇನೆ’ ಎಂದು ಬಿಜೆಪಿ ಮುಖಂಡ ಮಣಿಕಂಠ ರಾಠೋಡ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಣಿಕಂಠ, ‘ಜೇವರ್ಗಿ ಶಾಸಕ ಅಜಯ್ ಸಿಂಗ್ ಅವರು ತಮ್ಮದೇ ಕುಟುಂಬದಿಂದ ಹಣ ಖರ್ಚು ಮಾಡಿ ಕ್ಷೇತ್ರದ ಜನರಿಗೆ ಉಚಿತವಾಗಿ ಕಲ್ಯಾಣ ಮಂಟಪ ನಿರ್ಮಿಸಿದ್ದಾರೆ. ಆದರೆ, ಖರ್ಗೆ ಕುಟುಂಬದವರು ಸರ್ಕಾರವೇ ಕಲ್ಯಾಣ ಮಂಟಪಕ್ಕೆಂದು ಉಚಿತವಾಗಿ ನೀಡಿದ ಭೂಮಿಯಲ್ಲಿ ಸೊಸೈಟಿ ಕಚೇರಿ ನಡೆಸುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.

‘ಜಿಲ್ಲಾಧಿಕಾರಿ ಅವರು ನಿವೇಶನ ಹಂಚಿಕೆ ಸಂದರ್ಭದಲ್ಲಿ ವಿಧಿಸಿದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದೇನೆ’ ಎಂದರು.

‘ನಗರದ ಸಹಾರಾ ರಿಯಲ್ ಎಸ್ಟೇಟ್ ಸಂಸ್ಥೆಯಲ್ಲಿ ಕಾಂಗ್ರೆಸ್ ಪಕ್ಷದ ಕೆಲ ಮಾಜಿ ಸಚಿವರ ಪಾಲುದಾರಿಕೆಯಿದ್ದು, ಮುಂದಿನ ದಿನಗಳಲ್ಲಿ ದಾಖಲೆಗಳ ಸಮೇತ ಬಹಿರಂಗಪಡಿಸುವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT