ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಕೆಆರ್ಡಿಬಿ) 2025-26ನೇ ಸಾಲಿನ ₹ 5,000 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಅನುಮೋದನೆ ನೀಡುವಂತೆ ಕೋರಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ರಾಜ್ಯ ಯೋಜನಾ ಖಾತೆ ಸಚಿವ ಡಿ. ಸುಧಾಕರ್ ಅವರೊಂದಿಗೆ ಕೆಕೆಆರ್ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರು ಮನವಿ ಪತ್ರ ಸಲ್ಲಿಕೆ ಮಾಡಿದರು.

ಬೆಂಗಳೂರಿನಲ್ಲಿ ಶನಿವಾರ ಭೇಟಿ ಮಾಡಿದ ಅಧ್ಯಕ್ಷರು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದಿಂದ ಕೈಗೆತ್ತಿಕೊಂಡಿರುವ ಶಿಕ್ಷಣ, ಆರೋಗ್ಯ, ಉದ್ಯೋಗ, ಕೌಶಲ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿನ ಹೊಸ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮಾಹಿತಿ ನೀಡಿದರು.

ರಾಜ್ಯಪಾಲರು ರಾಜ್ಯದ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾಗಿದ್ದಾರೆ. ಹೀಗಾಗಿ, ಕಲ್ಯಾಣ ಕರ್ನಾಟಕದ ವಿಶ್ವವಿದ್ಯಾಲಯಗಳಿಗೂ ಮಂಡಳಿಯ ಅನುದಾನದ ಹಂಚಿಕೆಯಲ್ಲಿ ಪರಿಗಣಿಸುವಂತೆ ಸಲಹೆ ನೀಡಿದ್ದಾರೆ. ಏಳು ಜಿಲ್ಲೆಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಯೋಜನೆಗಳನ್ನು ರಾಜ್ಯಪಾಲರು ಮೆಚ್ಚಿಕೊಂಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ ತಿಂಗಳಲ್ಲಿ ನಡೆದಿದ್ದ ಕೆಕೆಆರ್ಡಿಬಿ ಸಭೆಯಲ್ಲಿನ ಚರ್ಚೆಗಳು, ನಿರ್ಣಯಗಳು ಹಾಗೂ ನಿಯಮಗಳ ಅನುಸಾರ 2025-26ರ ಸಾಲಿನ ಮೈಕ್ರೋ ಮತ್ತು ಮ್ಯಾಕ್ರೋ, ವಿವೇಚನೆ ಅನುದಾನ, ಆಡಳಿತಾತ್ಮಕ ವೆಚ್ಚ ಸೇರಿದಂತೆ ಎಲ್ಲಾ ಹಂತಗಳಲ್ಲಿಯೂ ಅನುದಾನ ಹಂಚಿಕೆ ಮಾಡುವ ಕ್ರಿಯಾ ಯೋಜನೆಗಳನ್ನು ರೂಪಿಸಲಾಗಿದೆ. ಜನಸಂಖ್ಯೆಗೆ ಅನುಗುಣವಾಗಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.