ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಕೆಆರ್‌ಡಿಬಿಯಿಂದ ಮೊದಲ ಕಂತು ಬಿಡುಗಡೆ

ಮಂಡಳಿ ವ್ಯಾಪ್ತಿಯ ಆರು ಜಿಲ್ಲಾಧಿಕಾರಿಗಳು, ಸಿಇಒಗಳೊಂದಿಗೆ ಅಧ್ಯಕ್ಷರ ವಿಡಿಯೊ ಕಾನ್ಫ್‌ರೆನ್ಸ್
Last Updated 22 ಆಗಸ್ಟ್ 2020, 6:17 IST
ಅಕ್ಷರ ಗಾತ್ರ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ವ್ಯಾಪ್ತಿಯ ಆರು ಜಿಲ್ಲೆಗಳಿಗೆ ಅಭಿವೃದ್ಧಿ ಕಾರ್ಯಗಳಿಗಾಗಿ ಮಂಡಳಿಯು ಮೊದಲ ಕಂತು ಬಿಡುಗಡೆ ಮಾಡಿದ್ದು, ಅದನ್ನು ಸದ್ಬಳಕೆ ಮಾಡಿಕೊಂಡು ಅಭಿವೃದ್ಧಿಗೆ ಪೂರಕವಾದ ವಾತಾವರಣ ಮೂಡಿಸಬೇಕು ಎಂದು ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಸಲಹೆ ನೀಡಿದರು.

ಶುಕ್ರವಾರ ಕಚೇರಿಯಿಂದ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳೊಂದಿಗೆ ವಿಡಿಯೊ ಕಾನ್ಫ್‌ರೆನ್ಸ್‌ ಮೂಲಕ ಸಭೆ ನಡೆಸಿದ ಅವರು, ಪ್ರಸಕ್ತ ಸಾಲಿನ ಕ್ರಿಯಾ ಯೋಜನೆ ಅನುಷ್ಠಾನ ಹಾಗೂ ಕ್ರಿಯಾ ರೂಪಿಸಿ ಸಲ್ಲಿಸಲು ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಈಗಾಗಲೇ ಮಂಡಳಿಯ ಧನಸಹಾಯದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು. ಅನುಷ್ಠಾನದಲ್ಲಾದ ವಿಳಂಬವನ್ನು ಗುರುತಿಸಿ ಸರಿಪಡಿಸಿಕೊಂಡು ಪೂರ್ಣಗೊಳಿಸಲು ಜಿಲ್ಲಾಡಳಿತಗಳಿಗೆ ಮನವಿ ಮಾಡಿದರು.

ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕಲಬುರ್ಗಿಗೆ ಬರಲಿದ್ದಾರೆ. ಆ ಕಾರ್ಯಕ್ರಮದ ನೇರ ಪ್ರಸಾರವನ್ನು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ವ್ಯವಸ್ಥೆ ಮಾಡಿ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ವೀಕ್ಷಣೆಗೆ ಅನುವು ಮಾಡಬೇಕು ಎಂದು ದತ್ತಾತ್ರೇಯ ಪಾಟೀಲ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳಿಗೆ ತಿಳಿಸಿದರು.

ವಿಡಿಯೊ ಕಾನ್ಫ್‌ರೆನ್ಸ್‌ ಸಂದರ್ಭದಲ್ಲಿ ಮಂಡಳಿ ಕಾರ್ಯದರ್ಶಿಯೂ ಆದ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ್ ಹಾಗೂ ಕೆಕೆಆರ್‌ಡಿಬಿ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT