ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸರ್ಕಾರದ ಅನುದಾನದ ಸದ್ಬಳಕೆಯಾಗಲಿ’

ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಸೂಚನೆ
Last Updated 8 ಸೆಪ್ಟೆಂಬರ್ 2020, 16:25 IST
ಅಕ್ಷರ ಗಾತ್ರ

ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸರ್ಕಾರವು ಹೆಚ್ಚಿನ ಪ್ರಮಾಣದಲ್ಲಿ ಅನುದಾನ ಬಿಡುಗಡೆ ಮಾಡುತ್ತಿದ್ದು, ಅಧಿಕಾರಿಗಳು ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ಸಿ. ರೇವೂರ ಸೂಚನೆ ನೀಡಿದರು.

ನಗರದ ಕೆಕೆಆರ್‌ಡಿಬಿ ಕಚೇರಿಯಲ್ಲಿ ಸೋಮವಾರ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.

ಕೆಕೆಆರ್‌ಡಿಬಿ ಕಾಮಗಾರಿಗಳ ಕುರಿತು ಈ ಭಾಗದ ಅಧಿಕಾರಿಗಳು ವಿಶೇಷವಾಗಿ ಗಮನಹರಿಸಬೇಕು ಮತ್ತು ಆಸ್ತಕಿಯಿಂದ ಕೆಲಸ ಮಾಡಬೇಕು. ಅಂದಾಗ ಮಾತ್ರ ಪ್ರಗತಿ ಹೊಂದಿ ಇನ್ನೂ ಹಲವಾರು ಅಭಿವೃದ್ಧಿ ಯೋಜನೆ ಮಾಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳು ಪ್ರತಿಯೊಂದು ಮಾಹಿತಿಯನ್ನು ಅಪ್‍ಡೇಟ್ ಮಾಡಬೇಕು. ಯಾವುದೇ ಅಡೆ–ತಡೆ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿ ಸಮಸ್ಯೆ ಬಗೆಹರಿಸಿಕೊಂಡು ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು.

ಬಾಕಿಯಿರುವ ಕಾಮಗಾರಿಗಳ ಬಗ್ಗೆ ಪ್ರತಿ ಹಂತದಲ್ಲೂ ಮಂಡಳಿಗೆ ಮಾಹಿತಿ ನೀಡಬೇಕು. ಜೇವರ್ಗಿ ತಾಲ್ಲೂಕಿನ ನಿರ್ಮಿತಿ ಕೇಂದ್ರದಲ್ಲಿ ನಡೆದ ಅವ್ಯವಹಾರದ ಕುರಿತು ತನಿಖೆಗೆ ನಡೆಸಲು ಜಿಲ್ಲಾಡಳಿತಕ್ಕೆ ಪತ್ರ ಬರೆಯುವುದಾಗಿ ಅವರು ತಿಳಿಸಿದರು.

ಮಂಡಳಿಯ ಕಾರ್ಯದರ್ಶಿ ಮತ್ತು ಪ್ರಾದೇಶಿಕ ಆಯುಕ್ತ ಡಾ. ಎನ್. ವಿ. ಪ್ರಸಾದ್, ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಜಾ ಪಿ., ಕೆಕೆಆರ್‌ಡಿಬಿ ಉಪ ಕಾರ್ಯದರ್ಶಿ ಡಾ. ಬಿ. ಸುಶೀಲಾ, ಜಂಟಿ ನಿರ್ದೇಶಕಿ ಪ್ರವೀಣ ಪ್ರಿಯಾ ಎನ್ ಡೇವಿಡ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT