ಗುರುವಾರ , ಜೂನ್ 24, 2021
27 °C

ಕಲಬುರ್ಗಿ: ಪ್ಲಾಸ್ಮಾ ಥೆರಪಿಗೆ ಕೆಕೆಆರ್‌ಡಿಬಿಯಿಂದ ₹ 40 ಲಕ್ಷ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಇಲ್ಲಿನ ಜಿಮ್ಸ್‌ ಆಸ್ಪತ್ರೆಯಲ್ಲಿ ಕೋವಿಡ್‌–19 ತಡೆಗೆ ಪ್ಲಾಸ್ಮಾ ಥೆರಪಿ ಚಿಕಿತ್ಸಾ ವಿಧಾನ ಅಳವಡಿಸಿಕೊಳ್ಳಲು ಅಗತ್ಯ ಉಪಕರಣಗಳನ್ನು ಖರೀದಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು (ಕೆಕೆಆರ್‌ಡಿಬಿ) ₹ 40 ಲಕ್ಷ ಬಿಡುಗಡೆ ಮಾಡಿದೆ.

ಸೋಮವಾರ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರು ಜಿಮ್ಸ್‌ ನಿರ್ದೇಶಕಿ ಡಾ. ಕವಿತಾ ಪಾಟೀಲ ಅವರಿಗೆ ಮಂಜೂರಾತಿ ಪತ್ರ ಹಸ್ತಾಂತರಿಸಿದರು.

‘ಇಎಸ್‌ಐಸಿ ಆಸ್ಪತ್ರೆಯಲ್ಲಿ ಕೋವಿಡ್‌ ಲ್ಯಾಬ್ ಆರಂಭಕ್ಕೆ ₹ 54 ಲಕ್ಷ ಮೊತ್ತದ ಮಂಜೂರಾತಿ ನೀಡಲಾಗಿದೆ. ಮಂಡಳಿ ವ್ಯಾಪ್ತಿಯ 6 ಜಿಲ್ಲೆಗಳಲ್ಲಿ ಒಂಬತ್ತು ಅಡ್ವಾನ್ಸ್‌ ಲೈಫ್ ಸಪೋರ್ಟ್‌ (ಎಎಲ್‌ಎಸ್‌) ಆಂಬುಲೆನ್ಸ್‌ ಖರೀದಿಗೆ ₹ 4.50 ಕೋಟಿ ಮೀಸಲಿರಿಸಲಾಗುತ್ತಿದೆ’ ಎಂದು ದತ್ತಾತ್ರೇಯ ಪಾಟೀಲ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು