ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಪದವೀಧರರು ಮತ್ತೆ ಕೈ ಹಿಡಿಯುವ ವಿಶ್ವಾಸ’

ಪರಿಷತ್‌ ಚುನಾವಣೆ: ಜೇರ್ವಗಿಯಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್‌ ಪ್ರಚಾರ
Published 2 ಜೂನ್ 2024, 6:22 IST
Last Updated 2 ಜೂನ್ 2024, 6:22 IST
ಅಕ್ಷರ ಗಾತ್ರ

ಕಲಬುರಗಿ: ‘ವಿಧಾನ ಪರಿಷತ್ತಿನ ಈಶಾನ್ಯ ಪದವೀಧರ ಮತಕ್ಷೇತ್ರಕ್ಕೆ ಜೂನ್‌ 3ರಂದು ನಡೆಯಲಿರುವ ಚುನಾವಣೆಯಲ್ಲಿ ಮತಕ್ಷೇತ್ರದ ಪ್ರಜ್ಞಾವಂತ ಪದವೀಧರ ಮತದಾರರು ಮತ್ತೊಮ್ಮೆ ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದಾರೆ’ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್‌ ಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯ ಜೇವರ್ಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಪರವಾಗಿ ನಡೆಸಿದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಈಶಾನ್ಯ ಕರ್ನಾಟಕ ಪದವೀಧರರ ಮತಕ್ಷೇತ್ರ ವ್ಯಾಪ್ತಿಯ ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗೆ 371 (ಜೆ) ಕಾಯ್ದೆ ನೆರವಾಗುತ್ತಿದೆ. ಅದರ ಜಾರಿಗೆ ಕಾಂಗ್ರೆಸ್‌ ನಾಯಕರ ಶ್ರಮವೇ ಕಾರಣ ಎಂಬುದನ್ನು ಪದವೀಧರರು ಮರೆಯಬಾರದು. ಜೊತೆಗೆ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ, ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ಮುಂತಾದ ಕ್ರಮಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಕೈಗೊಳ್ಳಲು ದಿಟ್ಟ ಹೆಜ್ಜೆ ಇಟ್ಟಿದೆ. ಪದವಿ ಹಾಗೂ ಡಿಪ್ಲೊಮಾ ಉತ್ತೀರ್ಣರಾದ ನಿರುದ್ಯೋಗಿ ಯುವಕರಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡಲು ‘ಯುವ ನಿಧಿ’ ಗ್ಯಾರಂಟಿ ಅನುಷ್ಠಾನಕ್ಕೆ ತಂದಿದೆ’ ಎಂದು ಮತದಾರರ ಗಮನ ಸೆಳೆದರು.

‘ಈ ಚುನಾವಣೆ ಕಣದಲ್ಲಿ ಪುನರಾಯ್ಕೆ ಬಯಸಿ ಕಾಂಗ್ರೆಸ್‌ನಿಂದ ಚಂದ್ರಶೇಖರ ಪಾಟೀಲ ಕಣದಲ್ಲಿದ್ದಾರೆ. ಶಿಕ್ಷಣ, ಉದ್ಯೋಗಾವಕಾಶಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಸಮಸ್ಯೆಗಳನ್ನು ಗುರುತಿಸಿ ಸರ್ಕಾರದ ಗಮನ ಸೆಳೆಯಲು ಚಂದ್ರಶೇಖರ ಅವರಿಗೆ ಆರು ವರ್ಷಗಳ ಅನುಭವವಿದೆ. ಜೊತೆಗೆ ಆಡಳಿತದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಪರಿಣಾಮಕಾರಿ ಸ್ಪಂದಿಸಲು ಸಾಧ್ಯವಾಗಲಿದೆ. ಹೀಗಾಗಿ ಪದವೀಧರರು ಕಾಂಗ್ರೆಸ್‌ ಅಭ್ಯರ್ಥಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವ ಮೂಲಕ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು’ ಎಂದು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT